ಚೆನ್ನೈ: ಸಿಎಎ ವಿರೋಧಿಸಿ ಪ್ರತಿಭಟನಾ ರ‍್ಯಾಲಿ, ಸ್ಟಾಲಿನ್ ಸೇರಿ ಇತರ 8 ಸಾವಿರ ಮಂದಿ ವಿರುದ್ಧ ಕೇಸ್ ದಾಖಲು 

ಪೊಲೀಸರ ಅನುಮತಿ ಪಡೆಯದೆ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನಾ ರ‍್ಯಾಲಿ ನಡೆಸಿದ ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್ ಸೇರಿದಂತೆ ಇತರ 8 ಸಾವಿರ ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಪ್ರತಿಭಟನೆಯಲ್ಲಿ ಸ್ಟಾಲಿನ್, ಪಿ. ಚಿದಂಬರಂ ಮತ್ತಿತರರು
ಪ್ರತಿಭಟನೆಯಲ್ಲಿ ಸ್ಟಾಲಿನ್, ಪಿ. ಚಿದಂಬರಂ ಮತ್ತಿತರರು

ಚೆನ್ನೈ:  ಪೊಲೀಸರ ಅನುಮತಿ ಪಡೆಯದೆ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನಾ ರ‍್ಯಾಲಿ ನಡೆಸಿದ ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್ ಸೇರಿದಂತೆ ಇತರ 8 ಸಾವಿರ ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಿನ್ನೆ ದಿನ ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ನೇತೃತ್ವದಲ್ಲಿ ಸಾವಿರಾರು ಮಂದಿ ಚೆನ್ನೈನ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ರ‍್ಯಾಲಿ ನಡೆಸಿದ್ದರು. 

ನೂತನ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್, ಸಿಪಿಐ, ಸಿಪಿಎಂ, ವಿದುತಲೈ ಚಿರುಥೈಗಲ್ ಕಾಚಿ, ಡಿಎಂಡಿಕೆ ಸೇರಿದಂತೆ ಇತರ ಪ್ರತಿಪಕ್ಷಗಳ ಹಿರಿಯ ನಾಯಕರು ಪಾಲ್ಗೊಂಡಿದ್ದರು. 

ಪೊಲೀಸರ ಅನುಮತಿ ಪಡೆಯದೆ ನಡೆದ ಪ್ರತಿಭಟನೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ, ದಯಾನಿಧಿ ಮಾರನ್, ಕೆ. ಕನ್ನಿಮೊಳಿ, ವೈಕೋ ಮತ್ತಿತರ ಅನೇಕ ಪ್ರತಿಪಕ್ಷಗಳ ಸಂಸದರು ಹಾಗೂ ಶಾಸಕರು ಭಾಗವಹಿಸಿದ್ದರು. 

ರಾಜಕೀಯ ನಾಯಕರನ್ನು ಹೊರತುಪಡಿಸಿದಂತೆ ಹೋರಾಟಗಾರರು, ನೂರಾರು ಮಂದಿ ರೈತರು, ವ್ಯಾಪಾರಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ್ದರು. 

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಸುಮಾರು 5 ಸಾವಿರ ಪೊಲೀಸರನ್ನು ನಿಯೋಜಿಸುವ ಮೂಲಕ ಸೂಕ್ತ ಭದ್ರತಾ ವ್ಯವಸ್ಥೆ ಕೈಗೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com