ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನಾಚರಣೆ: ರಾಷ್ಟ್ರಪತಿ, ಪ್ರಧಾನಿ ಭಾಗಿ 

ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ದಿನಾಚರಣೆ ಅಂಗವಾಗಿ ಭಾರತೀಯ ಜನತಾ ಪಾರ್ಟಿ ದೆಹಲಿಯ ರಾಜ್ ಘಾಟ್ ನಲ್ಲಿರುವ ಸದೈವ ಅಟಲ್ ಸ್ಮಾರಕದಲ್ಲಿ ಪ್ರಥಮ ಸಭೆ ಏರ್ಪಡಿಸಿದೆ. 
ರಾಷ್ಟ್ರಪತಿ ರಾಮನಾಥ್ ಕೋವಿಂದ್-ಪ್ರಧಾನಿ ನರೇಂದ್ರ ಮೋದಿ
ರಾಷ್ಟ್ರಪತಿ ರಾಮನಾಥ್ ಕೋವಿಂದ್-ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ದಿನಾಚರಣೆ ಅಂಗವಾಗಿ ಭಾರತೀಯ ಜನತಾ ಪಾರ್ಟಿ ದೆಹಲಿಯ ರಾಜ್ ಘಾಟ್ ನಲ್ಲಿರುವ ಸದೈವ ಅಟಲ್ ಸ್ಮಾರಕದಲ್ಲಿ ಪ್ರಥಮ ಸಭೆ ಏರ್ಪಡಿಸಿದೆ.


ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಬಿಜೆಪಿ ನಾಯಕರು ದೆಹಲಿಯ ಸದೈವ್ ಅಟಲ್ ಸ್ಮಾರಕ ಬಳಿ ತೆರಳಿ ಅಗಲಿದ ಚೇತನಕ್ಕೆ ಗೌರವ ನಮನ ಸಲ್ಲಿಸಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಮಾಜಿ ಪ್ರಧಾನಿಯನ್ನು ಸ್ಮರಿಸಿದ್ದಾರೆ.


ಭಾರತೀಯ ಜನತಾ ಪಾರ್ಟಿ ವತಿಯಿಂದ ಸ್ಮಾರಕ ಬಳಿ ಭಜನೆ, ಗೀತ ಗಾಯನ ಕಾರ್ಯಕ್ರಮ ನಡೆದಿದೆ.


ಇಂದು ಪ್ರಧಾನಿ ಮೋದಿ ಲಕ್ನೊದ ಲೋಕ ಭವನದಲ್ಲಿ ಅಟಲ್ ಬಿಹಾರಿ ವಾಜಪೇಯಿಯವರ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಅಟಲ್ ಬಿಹಾರಿ ವಾಜಪೇಯಿಯವರು ತಮ್ಮ ರಾಜಕೀಯ ಜೀವನ ಕಂಡುಕೊಂಡಿದ್ದು ಲಕ್ನೊ ಲೋಕಸಭಾ ಕ್ಷೇತ್ರದಿಂದಲೇ. 1991, 1998, 1999 ಮತ್ತು 2004ರಲ್ಲಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿ ಬಂದಿದ್ದರು. 
ಈ ಹಿನ್ನಲೆಯಲ್ಲಿ ಅವರ ಸ್ಮರಣಾರ್ಥ ಇಲ್ಲಿ ವಾಜಪೇಯಿ ಪ್ರತಿಮೆ ಅನಾವರಣಗೊಳ್ಳಲಿದೆ. ಸಮಾರಂಭ ನಡೆಯುವ ಸ್ಥಳ ಸುತ್ತಮುತ್ತ ತೀವ್ರ ಭದ್ರತೆ ಕಲ್ಪಿಸಲಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಯುತ್ತಿರುವುದರಿಂದ ಪ್ರಧಾನಿ ಭೇಟಿ ಹಿನ್ನಲೆಯಲ್ಲಿ ವಿಶೇಷ ಭದ್ರತೆ ಒದಗಿಸಲಾಗುತ್ತಿದೆ. 


ಇದೇ ಸಂದರ್ಭದಲ್ಲಿ ಮೋದಿಯವರು ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com