370 ವಿಧಿ ರದ್ದು: 145 ದಿನಗಳ ಬಳಿಕ ಕಾರ್ಗಿಲ್'ನಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಪುನರಾರಂಭ

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370 ವಿಧಿ ರದ್ದುಗೊಂಡು 145 ದಿನಗಳ ಬಳಿಕ ಲಡಾಖ್'ನ ಕಾರ್ಗಿಲ್ ನಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಪುನರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370 ವಿಧಿ ರದ್ದುಗೊಂಡು 145 ದಿನಗಳ ಬಳಿಕ ಲಡಾಖ್'ನ ಕಾರ್ಗಿಲ್ ನಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಪುನರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಕಾರ್ಗಿಲ್ ನಲ್ಲಿ ಪರಿಸ್ಥಿತಿ ಸಂಪೂರ್ಣವಾಗಿ ತಹಬದಿಗೆ ಬಂದ ಬಳಿಕ ಹಾಗೂ ಕಳೆದ 4 ತಿಂಗಳುಗಳಿಂದ ಯಾವುದೇ ರೀಯಿ ಅಹಿತಕರ ಘಟನೆಗಳು ಸಂಭವಿಸಿದ ಹಿನ್ನೆಲೆಯಲ್ಲಿ ಇಂಟರ್ನೆಟ್ ಸೇವೆಗಳನ್ನು ಪುನರಾರಂಭಿಸಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಇಂಟರ್ನೆಟ್ ಸೇವೆಗಳು ಪುನರಾರಂಭವಾಗಿರುವ ಹಿನ್ನೆಲೆಯಲ್ಲಿ ಸ್ಥಳೀಯ ಧಾರ್ಮಿಕ ನಾಯಕರು, ಸೌಲಭ್ಯಗಳನ್ನು ದುರ್ಬಳಕೆ ಮಾಡಿಕೊಳ್ಳದಂತೆ ಮನವಿ ಮಾಡಿಕೊಂಡಿದ್ದಾರೆ. 

ಬ್ರಾಂಡ್ ಬ್ಯಾಂಡ್ ಸೇವೆಗಳು ಈಗಾಗಲೇ ಕಾರ್ಗಿಲ್ ನಲ್ಲಿ ಚಾಲ್ತಿಯಲ್ಲಿದ್ದು, ಇದೀಗ ಮೊಬೈಲ್ ಇಂಟರ್ನೆಟ್ ಸೇವೆಂಗಳನ್ನು ಪುನರಾರಂಭಿಸಲಾಗಿದೆ. 

ಲಡಾಖ್ ಜಮ್ಮು ಮತ್ತು ಕಾಶ್ಮೀರದ ಕೇಂದ್ರೀಯ ಭಾಗವಾಗಿದ್ದು, ಆಗಸ್ಟ್ 5 ರಂದು ಕೇಂದ್ರ ಸರ್ಕಾರ 370 ವಿಧಿ ರದ್ದು ಮಾಡಿದ ಬಳಿಕ ಅಂದಿನಿಂದಲೂ ಕಾರ್ಗಿಲ್ ನಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿಕತಗೊಳಿಸಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com