ಮುಂಬೈ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ, ಇಬ್ಬರು ಸಾವು

ನಗರದ ಘಾಟ್ಕೋಪರ್ ಪ್ರದೇಶದಲ್ಲಿನ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮಹಿಳೆಯೊಬ್ಬರು ಸೇರಿದಂತೆ ಇಬ್ಬರು ಮೃತಪಟ್ಟಿರುವುದಾಗಿ ಶನಿವಾರ ವರದಿಗಳು ತಿಳಿಸಿವೆ.

Published: 28th December 2019 04:06 PM  |   Last Updated: 28th December 2019 04:06 PM   |  A+A-


factry1

ಕಾರ್ಖಾನೆಯಲ್ಲಿ ಬೆಂಕಿ

Posted By : Lingaraj Badiger
Source : UNI

ಮುಂಬೈ: ನಗರದ ಘಾಟ್ಕೋಪರ್ ಪ್ರದೇಶದಲ್ಲಿನ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮಹಿಳೆಯೊಬ್ಬರು ಸೇರಿದಂತೆ ಇಬ್ಬರು ಮೃತಪಟ್ಟಿರುವುದಾಗಿ ಶನಿವಾರ ವರದಿಗಳು ತಿಳಿಸಿವೆ.

ಕಳೆದ ಮಧ್ಯರಾತ್ರಿ ಈ ದುರಂತ ಸಂಭವಿಸಿದ್ದು, ಮಾಹಿತಿ ತಲುಪಿದ ತಕ್ಷಣ ಸುಮಾರು 15 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿವೆ.  

ಬೆಂಕಿಯ ತೀವ್ರ ಸ್ವರೂಪದ್ದಾಗಿದ್ದು, ಸ್ಥಳದಲ್ಲಿ ಹಲವು ರಾಸಾಯನಿಕಗಳನ್ನು ಸಂಗ್ರಹಿಸಿ ಇಟ್ಟಿದ್ದರಿಂದ ಬೆಂಕಿಯ ಜ್ವಾಲೆ ದೊಡ್ಡದಾಗಿ ವಿಸ್ತರಿಸಿತ್ತು ಎಂದು ಅಗ್ನಿಶಾಮಕ ದಳ ಸಿಬ್ಬಂದಿ ತಿಳಿಸಿದ್ದಾರೆ.

ದುರಂತದಲ್ಲಿ ಗಾಯಗೊಂಡ ಇಬ್ಬರನ್ನು ಹೊರತುಪಡಿಸಿ ಮತ್ತೊಬ್ಬ ವ್ಯಕ್ತಿ ನಾಪತ್ತೆಯಾಗಿದ್ದಾರೆ. ವ್ಯಕ್ತಿಯ ಪತ್ತೆಗೆ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. 

ಅಗ್ನಿ ಅವಘಡಕ್ಕೆ ಕಾರಣವನ್ನು ತಿಳಿಯಲು ಸಂಬಂಧಿಸಿದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp