ಮುಲಾಯಂ ಸಿಂಗ್ ಯಾದವ್
ಮುಲಾಯಂ ಸಿಂಗ್ ಯಾದವ್

ಮುಂಬೈ: ಹೊಟ್ಟೆನೋವು, ಮುಲಾಯಂ ಸಿಂಗ್ ಯಾದವ್ ಆಸ್ಪತ್ರೆಗೆ ದಾಖಲು

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ  ಹಾಗೂ ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಹೊಟ್ಟನೋವಿನ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮುಂಬೈ:  ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ  ಹಾಗೂ ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಹೊಟ್ಟನೋವಿನ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವೈದ್ಯರ ಸಲಹೆ ಮೇರೆಗೆ ಕಳೆದ ಮೂರು ದಿನಗಳಿಂದ ಹಿಂದೆ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಾಜಿ ರಕ್ಷಣಾ ಸಚಿವರೂ ಆಗಿರುವ 80 ವರ್ಷದ ಮುಲಾಯಂ ಸಿಂಗ್ ಯಾದವ್ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಹೊಟ್ಟೆನೋವಿನ ಸಮಸ್ಯೆಯಿಂದಾಗಿ ಅವರು ಆಸ್ಪತ್ರೆಗೆ ದಾಖಲಾಗಿರುವುದಾಗಿ ಅವರ ಆಪ್ತರೊಬ್ಬರು ತಿಳಿಸಿದ್ದಾರೆ . ಚಿಕಿತ್ಸೆಗೆ ಅವರು ಸ್ಪಂದಿಸುತ್ತಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಅವರು ಹೇಳಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com