'ಮಹಾ' ಸಂಪುಟ ವಿಸ್ತರಣೆ: ಉ.ಮು ಅಜಿತ್ ಪವಾರ್, ಆದಿತ್ಯ ಠಾಕ್ರೆ, ಅಶೋಕ್ ಚವಾಣ್ ಸಚಿವರಾಗಿ ಪ್ರಮಾಣ ವಚನ 

ಎನ್ ಸಿಪಿ ನಾಯಕ ಅಜಿತ್ ಪವಾರ್ ಸೋಮವಾರ ಮಹಾರಾಷ್ಟ್ರ ಸರ್ಕಾರದ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಅಜಿತ್ ಪವಾರ್, ಅಶೋಕ್ ಚವಾಣ್ ಅಧಿಕಾರ ಸ್ವೀಕಾರ
ಅಜಿತ್ ಪವಾರ್, ಅಶೋಕ್ ಚವಾಣ್ ಅಧಿಕಾರ ಸ್ವೀಕಾರ

ಮುಂಬೈ: ಎನ್ ಸಿಪಿ ನಾಯಕ ಅಜಿತ್ ಪವಾರ್ ಸೋಮವಾರ ಮಹಾರಾಷ್ಟ್ರ ಸರ್ಕಾರದ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಶಿವಸೇನಾ-ಎನ್ ಸಿಪಿ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗುವ ಮೂಲಕ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದು ಇದು ಎರಡನೇ ಬಾರಿಗೆ. 


ಕಳೆದ ನವೆಂಬರ್ 26ರಂದು ದೇವೇಂದ್ರ ಫಡ್ನವಿಸ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕರಿಸಿ ಅಲ್ಪಾವಧಿಗಷ್ಟೆ ಹುದ್ದೆಯಲ್ಲಿದ್ದರು. ನಂತರ ಬದಲಾದ ರಾಜಕೀಯ ವಿದ್ಯಾಮಾನಗಳಿಂದ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.


ಇಂದು ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆಯಾಗಿದ್ದು ಶಿವಸೇನಾ ನಾಯಕ ಸಿಎಂ ಉದ್ಧವ್ ಠಾಕ್ರೆಯ ಪುತ್ರ ಆದಿತ್ಯ ಠಾಕ್ರೆ, ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಿಎಂ ಅಶೋಕ್ ಚೌವಾಣ್ ಸೇರಿದಂತೆ ಸುಮಾರು 30 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. 


ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ಪಕ್ಷ ಮೈತ್ರಿಯಾಗಿ ಸರ್ಕಾರ ರಚಿಸಿ ಉದ್ಧವ್ ಠಾಕ್ರೆಯವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ 32 ದಿನಗಳ ನಂತರ ಸಚಿವ ಸಂಪುಟ ವಿಸ್ತರಣೆ ನಡೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com