ದೇಶದಲ್ಲಿ ಹಿಂಸೆ, ಪ್ರತೀಕಾರಕ್ಕೆ ಜಾಗವಿಲ್ಲ: ಯುಪಿ ಸಿಎಂಗೆ ಪ್ರಿಯಾಂಕಾ ತಿರುಗೇಟು

ದೇಶದಲ್ಲಿ ಹಿಂಸಾಚಾರ ಅಥವಾ ಸೇಡಿಗೆ ಜಾಗವಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು  ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಸೋಮವಾರ ತಿರುಗೇಟು ನೀಡಿದ್ದಾರೆ.
ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ

ನವದೆಹಲಿ: ದೇಶದಲ್ಲಿ ಹಿಂಸಾಚಾರ ಅಥವಾ ಸೇಡಿಗೆ ಜಾಗವಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು  ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಸೋಮವಾರ ತಿರುಗೇಟು ನೀಡಿದ್ದಾರೆ.

ಸಾರ್ವಜನಿಕ ಆಸ್ತಿ ಹಾನಿ ಮಾಡುವವರ ಆಸ್ತಿ ಜಪ್ತಿ ಮಾಡಲಾಗುವುದು ಎಂದು ಯೋಗಿ ಆದಿತ್ಯನಾಥ್ ಅವರು ಎಚ್ಚರಿಸಿದ ಬೆನ್ನಲ್ಲೇ, ಕೇಸರಿ ಪಕ್ಷದ ಹಿಂದೂತ್ವ ಅಥವಾ ಧರ್ಮ ಹಿಂಸಾಚಾರ ಮಾಡುವಂತೆ, ಸೇಡು ತೀರಿಸಿಕೊಳ್ಳುವಂತೆ ಹೇಳುವುದಿಲ್ಲ ಎಂದು ಕಾಂಗ್ರೆಸ್ ನಾಯಕಿ ಹೇಳಿದ್ದಾರೆ.

ತಮ್ಮ ನಾಲ್ಕು ದಿನಗಳ ಲಖನೌ ಭೇಟಿಯ ಕೊನೆಯ ದಿನವಾದ ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಪ್ರಿಯಾಂಕಾ, ‘ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ಉತ್ತರ ಪ್ರದೇಶದಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರು ಜನರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಮ್ಮ ಮೇಲೆ ಉತ್ತರ ಪ್ರದೇಶ ಪೊಲೀಸರು ಹಲ್ಲೆ ಮಾಡಿದ್ದಾರೆಂದು ಎರಡು ದಿನಗಳ ಹಿಂದೆ ಗಂಭೀರ ಆರೋಪ ಮಾಡಿದ್ದ ಪ್ರಿಯಾಂಕಾ, ಈ ದೇಶದಲ್ಲಿ ವೈರತ್ವ, ಹಿಂಸೆ ಮತ್ತು ಸೇಡಿಗೆ ಜಾಗವಿಲ್ಲ ಎಂದಿದ್ದಾರೆ.

ಉತ್ತರ ಪ್ರದೇಶ ಪೊಲೀಸರ ಕ್ರಮವನ್ನು ಖಂಡಿಸಿರುವ ಪ್ರಿಯಾಂಕಾ, ‘ನನ್ನ ಸುರಕ್ಷತೆ ಮುಖ್ಯ ಸಮಸ್ಯೆ ಅಲ್ಲ. ನಾವು ಸಾಮಾನ್ಯ ನಾಗರಿಕರ ಸುರಕ್ಷತೆ ಬಗ್ಗೆ ಮಾತನಾಡುತ್ತಿದ್ದೇವೆ. ನಮಗೆ ತಿಳಿದಿರುವ ಹಾಗೆ 5500 ಜನರನ್ನು ಬಂಧಿಸಲಾಗಿದೆ. ಹಲವರನ್ನು ಜೈಲಿಗೆ ತಳ್ಳಿ ಕೆಟ್ಟ ರೀತಿಯಲ್ಲಿ ನಡೆಸಿಕೊಳ್ಳಲಾಗಿದೆ. ಉತ್ತರ ಪ್ರದೇಶ ಪೊಲೀಸರು ಮತ್ತು ಅಲ್ಲಿನ ಆಡಳಿತ ತಪ್ಪು ಕಾರ್ಯಗಳಲ್ಲಿ ನಿರತವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com