ಅತ್ಯಾಚಾರ ಆರೋಪ: ದೇಶ ಬಿಟ್ಟು ಓಡಿ ಹೋಗಿರುವ ನಿತ್ಯಾನಂದನ ಆಶ್ರಮ ನೆಲಸಮ!

ಅತ್ಯಾಚಾರ ಆರೋಪಿ ನಿತ್ಯಾನಂದ ಸ್ವಾಮಿ ದೇಶ ಬಿಟ್ಟು ಪರಾರಿಯಾಗಿದ್ದು ಈ ಮಧ್ಯೆ ಅವರ ಆಶ್ರಮವನ್ನು ನಗರಾಭಿವೃದ್ಧಿ ಪ್ರಾಧಿಕಾರ ನೆಲಸಮಗೊಳಿಸಿದೆ.

Published: 30th December 2019 03:13 PM  |   Last Updated: 30th December 2019 03:13 PM   |  A+A-


Nithyananda

ನಿತ್ಯಾನಂದ ಸ್ವಾಮಿ

Posted By : Vishwanath S
Source : Online Desk

ಅಹಮದಾಬಾದ್(ಗುಜರಾತ್): ಅತ್ಯಾಚಾರ ಆರೋಪಿ ನಿತ್ಯಾನಂದ ಸ್ವಾಮಿ ದೇಶ ಬಿಟ್ಟು ಪರಾರಿಯಾಗಿದ್ದು ಈ ಮಧ್ಯೆ ಅವರ ಆಶ್ರಮವನ್ನು ನಗರಾಭಿವೃದ್ಧಿ ಪ್ರಾಧಿಕಾರ ನೆಲಸಮಗೊಳಿಸಿದೆ. 

ಸ್ವಯಂಘೋಷಿತ ದೇವಮಾನ ನಿತ್ಯಾನಂದ ಸ್ವಾಮೀಜಿ ಗುಜರಾತ್ ನ ಅಹಮದಾಬಾದ್ ನಲ್ಲಿರುವ ಯೋಗಿನಿ ಸರ್ವಜ್ಞಪೀಠ ಆಶ್ರಮಕ್ಕೆ ಸರ್ಕಾರಿ ನಿಯಮಗಳನ್ನು ಉಲ್ಲಂಘಿಸಿ ಭೂಮಿಯನ್ನು ಲೀಸ್ ಗೆ ನೀಡಿದ್ದ ದೆಹಲಿ ಪಬ್ಲಿಕ್ ಸ್ಕೂಲ್(ಡಿಪಿಎಸ್) ಪ್ರಾಂಶುಪಾಲರನ್ನು ಪೊಲೀಸರು ಬಂಧಿಸಿದ್ದರು. 

ಇದೀಗ ಅಹಮದಾಬಾದ್ ಹೊರವಲಯದಲ್ಲಿರುವ ಹೀರಾಪುರ ಗ್ರಾಮದಲ್ಲಿರುವ ಡಿಪಿಎಸ್ ಶಾಲೆಯ ಬಳಿ ಅಕ್ರಮವಾಗಿ ನಿರ್ಮಿಸಲಾಗಿದ್ದ ನಿತ್ಯಾನಂದನ ಆಶ್ರಮವನ್ನು ಅಹಮದಾಬಾದ್ ನಗರಾಭಿವೃದ್ಧಿ ಪ್ರಾಧಿಕಾರ ನೆಲಸಮಗೊಳಿಸುತ್ತಿದ್ದಾರೆ. 

Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp