ಸೀಮಾಂಚಲ ಎಕ್ಸ್ ಪ್ರೆಸ್ ರೈಲು ದುರಂತ: ಸಾವಿನ ಸಂಖ್ಯೆ 7ಕ್ಕೆ ಏರಿಕೆ, ಪ್ರಧಾನಿ ಮೋದಿ ಸಂತಾಪ

ಇಂದು ಮುಂಜಾನೆ ಹಳಿ ತಪ್ಪಿದ ಸೀಮಾಂಚಲ ಎಕ್ಸ್ ಪ್ರೆಸ್ ರೈಲು ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 7ಕ್ಕೆ ಏರಿಕೆಯಾಗಿದ್ದು, ಘಟನೆ ಸಂಬಂಧ ಪ್ರಧಾನಿ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ
ಪಾಟ್ನಾ: ಇಂದು ಮುಂಜಾನೆ ಹಳಿ ತಪ್ಪಿದ ಸೀಮಾಂಚಲ ಎಕ್ಸ್ ಪ್ರೆಸ್ ರೈಲು ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 7ಕ್ಕೆ ಏರಿಕೆಯಾಗಿದ್ದು, ಘಟನೆ ಸಂಬಂಧ ಪ್ರಧಾನಿ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ರೈಲು ಅಪಘಾತ ಸುದ್ದಿ ಕೇಳಿ ನಿಜಕ್ಕೂ ನಾನು ಆಘಾತಕ್ಕೊಳಗಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಸ್ಥರಿಗೆ ಸಾವಿನ ನೋವು ತಡೆಯುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಸಾವಿನ ಸಂಖ್ಯೆ 7ಕ್ಕೆ ಏರಿಕೆ
ಇನ್ನು ಸೀಮಾಂಚಲ ಎಕ್ಸ್ ಪ್ರೆಸ್ ರೈಲು ದುರಂತ ಸಂಬಂಧ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಅವಶೇಷಗಳಡಿಯಲ್ಲಿ ಮತ್ತೊಂದು ಶವ ಪತ್ತೆಯಾಗಿದೆ. ಆ ಮೂಲಕ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಿಆರ್ ಪಿಒ ರಾಜೇಶ್ ಕುಮಾರ್ ಅವರು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಜಖಂಗೊಂಡಿರುವ 9 ಬೋಗಿಗಳನ್ನು ತೆರವುಗೊಳಿಸಲಾಗುತ್ತಿದೆ. ಅಂತೆಯೇ ಅಪಾಯದಿಂದ ಪಾರಾಗಿರುವ 12 ಕೋಚ್ ಗಳನ್ನು ಬೇರೆಡೆ ಸ್ಥಳಾಂತರಿಸಲಾಗುತ್ತಿದೆ. ಹಾಜಿಪುರ ರೈಲು ನಿಲ್ದಾಣಕ್ಕೆ ಈ ಕೋಚ್ ಗಳನ್ನು ಕೊಂಡೊಯ್ಯಲಾಗುತ್ತದೆ. ಜಖಂಗೊಂಡಿರುವ ಬೋಗಿಳನ್ನು ಬರೌನಿ ರೈಲು ನಿಲ್ದಾಣಕ್ಕೆ ಸಾಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com