ಮೋದಿ vs ದೀದಿ: 3 ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ನಾಳೆ ಸಿಬಿಐ ಅರ್ಜಿ ವಿಚಾರಣೆ

ಶಾರದಾ ಚಿಟ್ ಫಂಡ್ ಹಗರಣ ಸಂಬಂಧ ಕೋಲ್ಕತ್ತ ಪೊಲೀಸ್ ಕಮೀಷನರ್ ರಾಜೀವ್ ಕುಮಾರ್ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಲು ಪಶ್ಚಿಮ ಬಂಗಾಳ ಸರ್ಕಾರ....

Published: 04th February 2019 12:00 PM  |   Last Updated: 05th February 2019 01:08 AM   |  A+A-


3 SC judges to hear CBI petition against Kolkata top cop tomorrow

3 ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ನಾಳೆ ಸಿಬಿಐ ಅರ್ಜಿ ವಿಚಾರಣೆ

Posted By : RHN RHN
Source : PTI
ನವದೆಹಲಿ: ಶಾರದಾ ಚಿಟ್ ಫಂಡ್ ಹಗರಣ ಸಂಬಂಧ ಕೋಲ್ಕತ್ತ ಪೊಲೀಸ್ ಕಮೀಷನರ್ ರಾಜೀವ್ ಕುಮಾರ್ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಲು ಪಶ್ಚಿಮ ಬಂಗಾಳ ಸರ್ಕಾರ ಅವಕಾಶ ನೀಡದೆ ಅಸಹಕಾರ ತೋರಿದ್ದ ಹಿನ್ನೆಲೆಯಲ್ಲಿ  ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸಿಬಿಐ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಪ್ರಕರಣ ನಾಳೆ (ಮಂಗಳವಾರ) ವಿಚಾರಣೆಗೆ ಬರಲಿದ್ದು  ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ, ನ್ಯಾಯಮೂರ್ತಿ ದೀಪಕ್ ಗುಪ್ತಾ ಮತ್ತು ನ್ಯಾಯಮೂರ್ತಿ ಸಂಜೀವ್ ಖನ್ನಾ ಒಳಗೊಂಡ ಮೂರು ನ್ಯಾಯಾಧೀಶರ ಸುಪ್ರೀಂ ಕೋರ್ಟ್ ಪೀಠವು ವಿಚಾರಣೆ ನಡೆಸಲಿದೆ.

ಭಾನುವಾರ ರಾತ್ರಿ ಕೋಲ್ಕತ್ತಾದ.ಪೊಲೀಸ್ ಕಮೀಷನರ್ ರಾಜೀವ್ ಕುಮಾರ್ ಅವರನ್ನು ವಿಚಾರಣೆ ನಡೆಸಲು ಅವರ ಅಧಿಕೃತ ನಿವಾಸಕ್ಕೆ ಸಿಬಿಐ ಅಧಿಕಾರಿಗಳ ತಂಡ ತೆರಳಿದ್ದಾಗ ರಾಜ್ಯ ಪೋಲೀಸರು ಐವರು ಸಿಬಿಐಅ ಅಧಿಕಾರಿಗಳನ್ನು ಆಯುಕ್ತರ ಮನೆ ಪ್ರವೇಶಿಸದಂತೆ ತಡೆದದ್ದಲ್ಲದೆ ಅವರನ್ನು ಬಂಧಿಸಿ ಠಾಣೆಗೆ ಕರೆದೊಯ್ದಿದ್ದರು.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರ ಸಿಬಿಐ ಸಂಸ್ಥೆಯನ್ನು ತನ್ನಿಷ್ಟದಂತೆ ಬಳಸಿದೆ ಎಂದು ಆರೋಪಿಸಿ ಅಹೋರಾತ್ರಿ ಸತ್ಯಾಗ್ರಹ ನಡೆಸಿದ್ದರು.
Stay up to date on all the latest ರಾಷ್ಟ್ರೀಯ news
Poll
RBI

ಕಾರ್ಪೊರೇಟ್‌ ಕಂಪನಿಗಳಿಗೆ ಬ್ಯಾಂಕ್‌ ಆರಂಭಿಸಲು ಅನುಮತಿಸುವಂತೆ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ನೀಡಿರುವ ಸಲಹೆಯನ್ನು ಸ್ವಾಗತಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp