ಗೋವಾ ಸಿಎಂ ಮನೋಹರ್ ಪರಿಕ್ಕರ್ ಆರೋಗ್ಯ ಗಂಭೀರ: ಗೋವಾ ಡೆಪ್ಯುಟಿ ಸ್ಪೀಕರ್

ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರ ಆರೋಗ್ಯ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

Published: 05th February 2019 12:00 PM  |   Last Updated: 05th February 2019 12:36 PM   |  A+A-


CM Manohar Parrikar is very unwell says Goa Deputy Speaker

ಸಂಗ್ರಹ ಚಿತ್ರ

Posted By : SVN SVN
Source : ANI
ಪಣಜಿ: ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರ ಆರೋಗ್ಯ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ನಿನ್ನೆಯಷ್ಟೇ ವಿಶ್ವ ಕ್ಯಾನ್ಸರ್ ದಿನದ ನಿಮಿತ್ತ ಟ್ವೀಟ್ ಮಾಡಿದ್ದ ಪರಿಕ್ಕರ್, ಧೈರ್ಯ ಮತ್ತು ದೃಢ ಸಂಕಲ್ಪದಿಂದ ಯಾವುದೇ ಖಾಯಿಲೆಗಳನ್ನು ಎದುರಿಸಬಹುದು ಎಂದು ಟ್ವೀಟ್ ಮಾಡಿದ್ದರು. ಆದರೆ ಟ್ವೀಟ್ ಮಾಡಿದ ಕೇವಲ 24 ಗಂಟೆಗಳೊಳಗೆ ಪರಿಕ್ಕರ್ ಆರೋಗ್ಯ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಗೋವಾ ಡೆಪ್ಯುಟಿ ಸ್ಪೀಕರ್ ಹಾಗೂ ಬಿಜೆಪಿ ಶಾಸಕ ಮೈಕೆಲ್ ಲೋಬೋ ಅವರು, ಪರಿಕ್ಕರ್ ಅವರ ಆರೋಗ್ಯ ಗಂಭೀರವಾಗಿದ್ದು, ಅವರ ಪರಿಸ್ಥಿತಿಯನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಗುಣಪಡಿಸಲಾಗದ ಸಮಸ್ಯೆಯಿಂದ ಪರಿಕ್ಕರ್ ಬಳಲುತ್ತಿದ್ದು, ದೇವರ ಆಶೀರ್ವಾದಿಂದ ಅವರು ಅವರು ಬದುಕುತ್ತಿದ್ದಾರೆ. ಕೆಲಸ ಮಾಡಲೆಂದೇ ದೇವರು ಅವರಿಗೆ ಆಶೀರ್ವಾದ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ಪ್ಯಾಂಕ್ರಿಯಾಟಿಕ್ ಸಮಸ್ಯೆಯಿಂದ ಬಳಲುತ್ತಿರುವ ಪರಿಕ್ಕರ್ ಗೆ ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.

ಈ ಹಿಂದೆ ಗೋವಾ ಬಜೆಟ್ ಮಂಡನೆ ವೇಳೆ ಪರಿಕ್ಕರ್ ಅನಾರೋಗ್ಯದ ನಡುವೆಯೇ ಮೂಗಿಗೆ ನಳಿಕೆಯನ್ನು ಅಳವಡಿಸಿಕೊಂಡೇ ಬಜೆಟ್ ಮಂಡಿಸಿದ್ದರು. ಅಲ್ಲದೆ ಆ ಬಳಿಕ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ಕೂಡ ಮಾಡಿದ್ದರು.
Stay up to date on all the latest ರಾಷ್ಟ್ರೀಯ news
Poll
IPL2020

ಚೀನಾದ ಪ್ರಾಯೋಜಕರೊಂದಿಗಿನ ಒಪ್ಪಂದವನ್ನು ಮುಂದುವರಿಸಿರುವ ಕಾರಣ ಭಾರತೀಯರು ಐಪಿಎಲ್ ಅನ್ನು ಬಹಿಷ್ಕರಿಸಬೇಕೆಂದು ಸ್ವದೇಶಿ ಜಾಗರನ್ ಮಂಚ್ ಹೇಳಿದೆ. ನೀವು ಏನಂತೀರಿ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp