ಸಂಸತ್ತಿನಲ್ಲಿ ಎನ್ ಡಿಎ ಸರ್ಕಾರವನ್ನು ಕಟ್ಟಿ ಹಾಕಲು ಪ್ರತಿಪಕ್ಷಗಳ ತಂತ್ರ

ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಲು ಸಿಬಿಐ ತಂಡ ಕೋಲ್ಕತ್ತಾ ಪೋಲಿಸ್...
ಭಾರತದ ಸಂಸತ್ತು
ಭಾರತದ ಸಂಸತ್ತು

ನವದೆಹಲಿ: ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಲು ಸಿಬಿಐ ತಂಡ ಕೋಲ್ಕತ್ತಾ ಪೋಲಿಸ್ ಕಮಿಷನರ್ ರಾಜೀವ್ ಕುಮಾರ್ ಅವರ ನಿವಾಸಕ್ಕೆ ಆಗಮಿಸಿದ ಬಳಿಕ ಪೊಲೀಸರು ಐದು ಸಿಬಿಐ ಅಧಿಕಾರಿಗಳನ್ನು ಬಂಧಿಸಿದ ನಂತರ ನಡೆದ ಬೆಳವಣಿಗೆಗಳನ್ನು ಪ್ರತಿಪಕ್ಷಗಳು ಕುತೂಹಲದಿಂದ ನೋಡುತ್ತಿದ್ದು ಈ ಕುರಿತು ಬಿಸಿಬಿಸಿ ಚರ್ಚೆಯಲ್ಲಿ ತೊಡಗಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೋಲ್ಕತ್ತಾದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ಶಿವಸೇನೆ ಮತ್ತು ಬಿಜೆಡಿಗಳು ಅಂತರದಿಂದ ಬೆಂಬಲ ಸೂಚಿಸಿವೆ. ಆದರೆ ಸಾರ್ವಜನಿಕವಾಗಿ ಧರಣಿಯಲ್ಲಿ ಪಾಲ್ಗೊಳ್ಳುವುದರಿಂದ ದೂರ ಉಳಿದಿವೆ.

ಸಂಸತ್ತಿನಲ್ಲಿ ನಿನ್ನೆ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ದ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ಸುಮಾರು 20 ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದರು. ನಿನ್ನೆ ಸಂಸತ್ತು ಕಲಾಪದಲ್ಲಿ ಈ ವಿಷಯ ಕುರಿತು ಚರ್ಚೆಗಳು ಬಂದು ಕಲಾಪಗಳಿಗೆ ಅಡ್ಡಿಯುಂಟಾಯಿತು. ಇಂದು ಮತ್ತೆ ಪ್ರತಿಪಕ್ಷ ನಾಯಕರು ಸೇರಿ ತಮ್ಮ ಮುಂದಿನ ಕಾರ್ಯತಂತ್ರಗಳ ಕುರಿತು ಚರ್ಚಿಸಲಿದ್ದಾರೆ.

ಇಂದು ಧರಣಿಯಲ್ಲಿ ಮಮತಾ ಜೊತೆ ಡಿಎಂಕೆ ನಾಯಕ ಕನ್ನಿಮೊಳಿ, ಆರ್ ಜೆಡಿ ನಾಯಕ ತೇಜಸ್ವಿ ಯಾದವ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಎಸ್ ಪಿ ಕಿರಣ್ಮಯಿ ನಂದ ಭಾಗವಹಿಸಲಿದ್ದಾರೆ.

ಕೇಂದ್ರ ಸಂಸ್ಥೆಗಳಾದ ಸಿಬಿಐ, ಇಡಿ ಮತ್ತು ಐಟಿ ಇಲಾಖೆಗಳನ್ನು ಎನ್ ಡಿಎ ಸರ್ಕಾರ ರಾಜಕೀಯ ಉದ್ದೇಶಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಎಡ ಪಕ್ಷಗಳು ಆರೋಪಿಸಿವೆ, ಆದರೆ ಇದೇ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿಯವರು ಚಿಟ್ ಫಂಡ್ ಹಗರಣದ ಆರೋಪಿಗಳನ್ನು ರಕ್ಷಿಸುತ್ತಿದ್ದಾರೆ ಎಂದು ಕೂಡ ಹೇಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com