ಪಶ್ಚಿಮ ಬಂಗಾಳದ ಪುರುಲಿಯಾ ತಲುಪಲು ಜಾರ್ಖಂಡ್ ನಿಂದ ರಸ್ತೆ ಮಾರ್ಗವಾಗಿ ಯೋಗಿ ಆದಿತ್ಯನಾಥ್ ಪ್ರಯಾಣ

ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ಆಯೋಜಿಸಿರುವ ಬಿಜೆಪಿ ರ‍್ಯಾಲಿಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಜಾರ್ಖಂಡ್ ನ ಬೊಕಾರೊ ಮೂಲಕ ರಸ್ತೆ ಮಾರ್ಗದಲ್ಲಿ ಪ್ರಯಾಣಿಸಿಬೇಕಾಗಿದೆ.
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್

ಲಖನೌ:  ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ  ಆಯೋಜಿಸಿರುವ ಬಿಜೆಪಿ ರ‍್ಯಾಲಿಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಜಾರ್ಖಂಡ್ ನ ಬೊಕಾರೊ ಮೂಲಕ ರಸ್ತೆ ಮಾರ್ಗದಲ್ಲಿ ಪ್ರಯಾಣಿಸಿಬೇಕಾಗಿದೆ.

ಯೋಗಿ ಆದಿತ್ಯನಾಥ್  ಜಾರ್ಖಂಡ್ ನ ರಾಂಚಿಯವರೆಗೂ ವಿಮಾನದಲ್ಲಿ ಸಂಚರಿಸಿ ನಂತರ ಹೆಲಿಕಾಪ್ಟರ್ ಮೂಲಕ ಬೊಕಾರೊಗೆ ತೆರಳಲಿದ್ದಾರೆ. ಅಲ್ಲಿಂದ ಪಶ್ಚಿಮ ಬಂಗಾಳದ ಪುರುಲಿಯಾಕ್ಕೆ ರಸ್ತೆ ಮಾರ್ಗದಲ್ಲಿ ತೆರಳಲಿದ್ದಾರೆ ಎಂದು  ಆದಿತ್ಯನಾಥ್ ಅವರ ಸಹಚರರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ಯೋಗಿ ಆದಿತ್ಯನಾಥ್  ಹೆಲಿಕಾಪ್ಟರ್ ಲ್ಯಾಂಡ್ ಆಗಲು ಅನುಮತಿ ನಿರಾಕರಿಸಿದ ಕಾರಣ ಪಶ್ಚಿಮ ಬಂಗಾಳದ ಬಾಂಕುರಾ ಜಿಲ್ಲೆಯಲ್ಲಿ ನಿನ್ನೆ ನಡೆಯಬೇಕಾಗಿದ್ದ ಕಾರ್ಯಕ್ರಮವನ್ನು ಇಂದು ನಡೆಸಲು ಉದ್ದೇಶಿಸಲಾಗಿತ್ತು.  ಆದಾಗ್ಯೂ,  ನಿಗದಿತಯಂತೆಯ ಪುರುಲಿಯಾ ಬಿಜೆಪಿ ರ‍್ಯಾಲಿ ನಡೆಯಲಿದೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ ದಿಲಿಪ್ ಗೋಷ್ ಹೇಳಿದ್ದಾರೆ.

ಗುರುದೇವ ಠಾಗೋರ್ ಅವರ ಕರ್ಮಭೂಮಿ , ಪಶ್ಚಿಮ ಬಂಗಾಳ ಇಂದು ಮಮತಾ ಬ್ಯಾನರ್ಜಿ ಅವರ ದುರಾಡಳಿತದಿಂದ ನರಳುತ್ತಿದೆ. ಸದೃಢ ಪ್ರಜಾಸತಾತ್ಮಕ ನಡೆಯಿಂದ  ಪಶ್ಚಿಮ ಬಂಗಾಳ ಸರ್ಕಾರವನ್ನು  ಕಿತ್ತೊಗೆದ್ದು, ಸಂವಿಧಾನವನ್ನು ರಕ್ಷಿಸಬೇಕಾಗಿದೆ ಎಂದು ಯೋಗಿ ಆದಿತ್ಯನಾಥ್  ಬೆಳಗ್ಗೆ ಟ್ವೀಟ್ ಮಾಡಿದ್ದರು.

ಭಾನುವಾರ ಯೋಗಿ ಆದಿತ್ಯನಾಥ್ ಅವರ ಹೆಲಿಕಾಪ್ಟರ್ ಲ್ಯಾಂಡ್ ಆಗಲು  ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಅನುಮತಿ ನಿರಾಕರಿಸಿದ ನಂತರ ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್ ನಡುವೆ ವಾಗ್ವಾದ ಏರ್ಪಟ್ಟಿತ್ತು.
ಬಾಲೂರ್ ಘಾಟ್ ಹಾಗೂ ರಾಜ್ ಗುಂಜ್ ನಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ಟೆಲಿಪೋನ್ ಮೂಲಕ ಯೋಗಿ ಆದಿತ್ಯನಾಥ್ ಭಾಷಣ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com