ಅಸಹ್ಯಕರ ಘಟನೆ: ಮೆಟ್ರೋ ಲಿಫ್ಟ್‌ನಲ್ಲಿ ಯುವ ಜೋಡಿಗಳ ಮುತ್ತಿನಾಟ: ವಿಡಿಯೋ ವೈರಲ್!

ಮೆಟ್ರೋ ನಿಲ್ದಾಣದ ಲಿಫ್ಟ್‌ನಲ್ಲಿ ಯುವ ಪ್ರೇಮಿ ಜೋಡಿಗಳು ಮೈಮರೆತು ಚುಂಬಿಸುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Published: 09th February 2019 12:00 PM  |   Last Updated: 09th February 2019 02:04 AM   |  A+A-


ಸಂಗ್ರಹ ಚಿತ್ರ

Posted By : VS VS
Source : Online Desk
ಹೈದರಾಬಾದ್: ಮೆಟ್ರೋ ನಿಲ್ದಾಣದ ಲಿಫ್ಟ್‌ನಲ್ಲಿ ಯುವ ಪ್ರೇಮಿ ಜೋಡಿಗಳು ಮೈಮರೆತು ಚುಂಬಿಸುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಮೆಟ್ರೋದ ಯಾವ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಹೀಗಾಗಿ ಸ್ಥಳಪತ್ತೆ ಮಾಡಿದ ಬಳಿಕ ಪೊಲೀಸರು ಸೂಕ್ತ ತನಿಖೆ ನಡೆಸಲಿದ್ದಾರೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ. 

ಹೈದರಬಾದ್ ಮೆಟ್ರೋ ನಿಲ್ದಾಣದಲ್ಲಿ ಈ ರೀತಿಯ ಅಸಹ್ಯಕರ ಘಟನೆ ನಡೆದಿರುವುದು ಇದೇ ಮೊದಲು. ಇಂತಹ ಘಟನೆಯಲ್ಲಿ ಭಾಗಿಯಾಗಿರುವ ಯುವ ಜೋಡಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವುದಾಗಿ ಹೈದರಾಬಾದ್ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕ ಎನ್ ವಿಎಸ್ ರೆಡ್ಡಿ ತಿಳಿಸಿದ್ದಾರೆ.

ವಿಡಿಯೋ ಕೃಪೆ: ಯೂಟ್ಯೂಬ್
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp