ಚುನಾವಣಾ ಆಯೋಗದ ಬಿಜೆಪಿ ಕಚೇರಿಯಾಗಿ ಬದಲಾಗಿದೆ: ಸಿಎಂ ಅರವಿಂದ್ ಕೇಜ್ರಿವಾಲ್

ಚುನಾವಣಾ ಆಯೋಗದ ಕಚೇರಿ ಬಿಜೆಪಿ ಕಚೇರಿಯಾಗಿ ಬದಲಾವಣೆಯಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ...
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
ನವದೆಹಲಿ: ಚುನಾವಣಾ ಆಯೋಗದ ಕಚೇರಿ ಬಿಜೆಪಿ ಕಚೇರಿಯಾಗಿ ಬದಲಾವಣೆಯಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ, 
ದೆಹಲಿಯಲ್ಲಿ ಮಿಸ್ ಲೀಡಿಂಗ್ ಕರೆ ವಿಚಾರವಾಗಿ ತನಿಖೆ ನಡೆಸುವಂತೆ ದೆಹಲಿ ಪೊಲೀಸರಿಗೆ ಚುನಾವಣಾ ಆಯೋಗ ಆದೇಶಿಸಿರುವ ಹಿನ್ನೆಲೆಯಲ್ಲಿ ಎಎಪಿ ಮತ್ತು ಬಿಜೆಪಿ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ.
ಚುನಾವಣಾ ಆಯೋಗ ಬಿಜೆಪಿ ಕಚೇರಿಯಾಗಿ ಬದಲಾಗುತ್ತಿದೆ,ಸರ್ಕಾರದ ಪ್ರತಿ ಸಂಸ್ಥೆಯ ಮೇಲೂ ಮೋದಿ ತನ್ನ ಹಿಡಿತ ಸಾಧಿಸುತ್ತಿದ್ದಾರೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ, ಆದರೆ ಬಿಜೆಪಿಯ ಇಂತಹ ಪಿತೂರಿಗಳು ಯಶಸ್ವಿಯಾಗಲು ನಾವು ಬಿಡುವುದಿಲ್ಲ.
ಪ್ರಧಾನಿ ನರೇಂದ್ರ ಮೋದಿ ನಾನು ಪೊಲೀಸ್ ಮತ್ತು ಚುನಾವಣಾ ಆಯೋಗದ ಯಾವುದೇ ಕೆಲಸಗಳಲ್ಲಿ ಭಾಗಿಯಾಗುವುದಿಲ್ಲ ಎಂದು ಹೇಳುತ್ತಾರೆ, ಆದರೆ ತಪ್ಪು, ಹೊಲಸು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ,
ಸಮಾಜದಲ್ಲಿ ಶಾಂತಿ ನೆಮ್ಮದಿ ಹಾಳು ಮಾಡಲು ಎಎಪಿ ಜನರನ್ನು ಹಾದಿ ತಪ್ಪಿಸುತ್ತಿದೆ ಎಂದು ತಿವಾರಿ ದೂರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com