ನರೇಂದ್ರ ಮೋದಿ ಪಾಕಿಸ್ತಾನದ ಪ್ರಧಾನಿಯಂತೆ ವರ್ತಿಸುತ್ತಿದ್ದಾರೆ: ಅರವಿಂದ್ ಕೇಜ್ರಿವಾಲ್

ವಿಭಜಿತ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ...

Published: 11th February 2019 12:00 PM  |   Last Updated: 11th February 2019 04:52 AM   |  A+A-


ಚಂದ್ರಬಾಬು ನಾಯ್ಡು-ಅರವಿಂದ್ ಕೇಜ್ರಿವಾಲ್

Posted By : VS VS
Source : Online Desk
ನವದೆಹಲಿ: ವಿಭಜಿತ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿರುವ ದೆಹಲಿ ಮಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಧಾನಿ ಮೋದಿ ಪಾಕಿಸ್ತಾನದ ಪ್ರಧಾನಿಯಂತೆ ವರ್ತಿಸುತ್ತಿದ್ದಾರೆ ಎಂದರು.

ನರೇಂದ್ರ ಮೋದಿ ಯಾವುದೇ ಪಕ್ಷದ ಪ್ರಧಾನಮಂತ್ರಿಯಲ್ಲ ಈ ದೇಶದ ಪ್ರಧಾನಮಂತ್ರಿ. ಅವರು ಇತರ ರಾಜ್ಯಗಳಲ್ಲಿ ವಿರೋಧ ಪಕ್ಷದ ಸರ್ಕಾರವನ್ನು ಪರಿಗಣಿಸುವುದನ್ನು ನೋಡಿದರೆ ಅವರು ಭಾರತದ ಪ್ರಧಾನಿಯಲ್ಲ. ಪಾಕಿಸ್ತಾನದ ಪ್ರಧಾನಿಯಂತೆ ವರ್ತಿಸುತ್ತಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ವಿಶೇಷ ಸ್ಥಾನಮಾನಕ್ಕಾಗಿ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ರಾಜ್ಯವನ್ನು ಬಿಟ್ಟು ದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದು ಇದನ್ನು ನೋಡಿದರೆ ತುಂಬಾ ದುಃಖವಾಗುತ್ತದೆ. ಇವುಗಳೆಲ್ಲವನ್ನು ನೋಡಿದರೆ ದೇಶದಲ್ಲಿ ಫೆಡರಲ್ ರಚನೆಯ ಬಗ್ಗೆ ಪ್ರಶ್ನೆಗಳು ಮೂಡುತ್ತದೆ ಎಂದರು.

ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ಮೋದಿ ಸಾರ್ವಜನಿಕವಾಗಿ ಘೋಷಿಸಿದ್ದರು. ಆದರೆ ಇದೀಗ ಜಾಗತಿಕ ಮಟ್ಟದಲ್ಲಿ ಶುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದು ಹೇಳಿದರು.
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp