'ರಫೆಲ್' ಲೂಟಿಗೆ ಬಾಗಿಲು ತೆರೆದಿದ್ದೇ ಪ್ರಧಾನಿ ಮೋದಿ: ರಾಹುಲ್ ಗಾಂಧಿ

ಹಿಂದೂ ಪತ್ರಿಕೆಯ ತನಿಖಾ ವರದಿ ಬಹಿರಂಗ ಬೆನ್ನಲ್ಲೇ ಮತ್ತೆ ರಫೆಲ್ ಯುದ್ಧ ವಿಮಾನ ಒಪ್ಪಂದ ಚರ್ಚೆಗೆ ಹೊಸ ಟ್ವಿಸ್ಟ್ ದೊರೆತಿದ್ದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ಸುತ್ತಿನ ವಾಗ್ದಾಳಿ ನಡೆಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಹಿಂದೂ ಪತ್ರಿಕೆಯ ತನಿಖಾ ವರದಿ ಬಹಿರಂಗ ಬೆನ್ನಲ್ಲೇ ಮತ್ತೆ ರಫೆಲ್ ಯುದ್ಧ ವಿಮಾನ ಒಪ್ಪಂದ ಚರ್ಚೆಗೆ ಹೊಸ ಟ್ವಿಸ್ಟ್ ದೊರೆತಿದ್ದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ಸುತ್ತಿನ ವಾಗ್ದಾಳಿ ನಡೆಸಿದ್ದಾರೆ.
ಇಂದು ದೆಹಲಿಯಲ್ಲಿ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ನಡೆಸುತ್ತಿರುವ ಒಂದು ದಿನದ ಉಪವಾಸ ಸತ್ಯಾಗ್ರಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ರಾಹುಲ್ ಗಾಂಧಿ, ಆಂಧ್ರ ಪ್ರದೇಶ ಜನರ ದುಡ್ಡನ್ನು ಕೊಳ್ಳೆ ಹೊಡೆದು ಪ್ರಧಾನಿ ಮೋದಿ ಅನಿಲ್ ಅಂಬಾನಿ ಕೈಗೆ ನೀಡಿದ್ದಾರೆ. ರಫೇಲ್ ಒಪ್ಪಂದದ ಮೂಲಕ ಅನಿಲ್ ಅಂಬಾನಿ ಲೂಟಿಗೆ ಪ್ರಧಾನಿ ಮೋದಿ ಅವರೇ ಬಾಗಿಲು ತೆರಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
'ಪ್ರತಿಯೊಂದು ರಕ್ಷಣಾ ಒಪ್ಪಂದದಲ್ಲೂ ಭ್ರಷ್ಟಾಚಾರ ನಿಗ್ರಹ ಷರತ್ತು ಇರುತ್ತದೆ. ಆದರೆ, ಪ್ರಧಾನಿ ಮೋದಿ ಅವರು ಭ್ರಷ್ಟಾಚಾರ ನಿಗ್ರಹ ಷರತ್ತನ್ನು ಉಲ್ಲಂಘಿಸಿದ್ದಾರೆ. ನರೇಂದ್ರ ಮೋದಿ ಅವರು ಲೂಟಿ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಚೌಕಿದಾರ ಚೋರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್​ ಕೂಡ ಮಾಡಿರುವ ರಾಹುಲ್ ಗಾಂಧಿ, ಚೌಕಿದಾರರಾಗಿರುವ ಮೋದಿ ಅವರೇ ಅನಿಲ್ ಅಂಬಾನಿ ಅವರಿಗೆ ಭಾರತೀಯ ವಾಯುಸೇನೆಯಿಂದ 30 ಸಾವಿರ ಕೋಟಿ ಲೂಟಿ ಮಾಡಲು ಬಾಗಿಲು ತೆರೆದುಕೊಟ್ಟಿದ್ದಾರೆ ಎಂದು ಟೀಕಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com