ಪ್ರಧಾನಿ ಮೋದಿ ಅನಿಲ್ ಅಂಬಾನಿ ಮಧ್ಯವರ್ತಿಯಂತೆ ವರ್ತಿಸುತ್ತಿದ್ದಾರೆ: ರಾಹುಲ್ ಗಾಂಧಿ

ರಾಫೆಲ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೆ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ರಾಫೆಲ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೆ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ.
ರಾಫೆಲ್ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಅವರ ವರ್ತನೆಯನ್ನುಗಮನಿಸಿದರೆ ಅವರು ಅನಿಲ್ ಅಂಬಾನಿ ಅವರ ಮಧ್ಯವರ್ತಿಯಂತೆ ವರ್ತಿಸುತ್ತಿದ್ದಾರೆ. ಪ್ರಸ್ತುತ ಬಿಡುಗಡೆಯಾಗಿರುವ ಈ ಮೇಲ್ ನಲ್ಲಿ ಅನಿಲ್ ಅಂಬಾನಿ ಪ್ರೆಂಚ್ ರಕ್ಷಣಾ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಅದೂ ಕೂಡ ಕೇಂದ್ರ ಸರ್ಕಾರ ರಾಫೆಲ್ ಒಪ್ಪಂದಕ್ಕೆ ಸಹಿ ಹಾಕುವ 10 ದಿನಗಳ ಮೊದಲೇ.. ಕೇಂದ್ರ ಸರ್ಕಾರ ಇಂತಹುದೊಂದು ಒಪ್ಪಂದಕ್ಕೆ ಸಹಿ ಹಾಕಲಿದೆ ಎಂದು ಅನಿಲ್ ಅಂಬಾನಿಗೆ ಮೊದಲೇ ತಿಳಿದಿತ್ತೇ..? ಎಂದು ಪ್ರಶ್ನಿಸಿದ್ದಾರೆ.
'ಒಪ್ಪಂದದ ಕುರಿತು ರಕ್ಷಣಾ ಸಚಿವರು, ಎಚ್ಎಎಲ್ ನಿರ್ದೇಶಕರು, ವಿದೇಶಾಂಗ ಕಾರ್ಯದರ್ಶಿಗಳು ಯಾರಿಗೂ ತಿಳಿಯದ ಒಪ್ಪಂದದ ಕುರಿತು ಅನಿಲ್ ಅಂಬಾನಿ ಅವರಿಗೆ ಹೇಗೆ ತಿಳಿಯಿತು. ಇದು ನಿಜಕ್ಕೂ ಆಘಾತಕಾರಿ ವಿಚಾರ, ಪ್ರಧಾನಿ ಮೋದಿ ನಿಯಮಾವಳಿಗಳನ್ನು ಗಾಳಿಗೆ ತೂರಿದ್ದಾರೆ. ಹೀಗಾಗಿ ಈ ಕುರಿತು ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂದು ರಾಹುಲ್ ಗಾಂಧಿ ಹೇಳಿದರು. 
ಅಂತೆಯೇ ಸುಪ್ರೀಂ ಕೋರ್ಟ್ ಕೂಡ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ತನ್ನ ವ್ಯಾಪ್ತಿಯದ್ದಲ್ಲ ಎಂದು ಹೇಳಿದೆ. ಆದರೆ ಸುಪ್ರೀಂ ಕೋರ್ಟ್ ನ ಈ ನಡೆ ನನಗೆ ಅಚ್ಚರಿ ಮೂಡಿಸಿದೆ. ಸಿಎಜಿ ವರದಿ ಕೂಡ ತನ್ನ ಮೌಲ್ಯ ಕಳೆದುಕೊಂಡಿದೆ. ಈ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯಿಸಲೇ ಬೇಕು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com