ಲೋಕಸಭಾ ಚುನಾವಣೆ: ಮಹಾಘಟಬಂಧನ್' ನಾಯಕ ಯಾರು, ಅಮಿತ್ ಶಾ ಪ್ರಶ್ನೆ

ಭಾರತ ಸೂಪರ್ ಪವರ್ ರಾಷ್ಟ್ರವಾಗಿ ಹೊರಹೊಮ್ಮುವಲ್ಲಿ ಮುಂಬರುವ ಲೋಕಸಭಾ ಚುನಾವಣೆ ಪ್ರಮುಖವಾದ ಹಂತವಾಗಿದ್ದು, ನರೇಂದ್ರ ಮೋದಿ ಅವರಿಗೆ ಜನತೆ ಬೆಂಬಲ ನೀಡಲಿದ್ದಾರೆ ಎಂದಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

Published: 12th February 2019 12:00 PM  |   Last Updated: 12th February 2019 02:56 AM   |  A+A-


Amitsha

ಅಮಿತ್ ಶಾ

Posted By : ABN ABN
Source : The New Indian Express
ಅಹಮದಾಬಾದ್: ಭಾರತ ಸೂಪರ್ ಪವರ್ ರಾಷ್ಟ್ರವಾಗಿ ಹೊರಹೊಮ್ಮುವಲ್ಲಿ  ಮುಂಬರುವ ಲೋಕಸಭಾ ಚುನಾವಣೆ ಪ್ರಮುಖವಾದ ಹಂತವಾಗಿದ್ದು, ನರೇಂದ್ರ ಮೋದಿ ಅವರಿಗೆ ಜನತೆ ಬೆಂಬಲ ನೀಡಲಿದ್ದಾರೆ ಎಂದಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಪ್ರಯತ್ನಿಸುತ್ತಿರುವ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ,ರಾಜ್ಯಮಟ್ಟದ ನಾಯಕರೊಂದಿಗೆ ಮಹಾಮೈತ್ರಿ ಮಾಡಿಕೊಳ್ಳಲಾಗುತ್ತಿದೆ.ಇದರಿಂದ ಬಿಜೆಪಿಯ ಚುನಾವಣಾ ಆಶೋತ್ತರಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ.

ಪ್ರತಿಪಕ್ಷಗಳಲ್ಲಿ ಪ್ರಧಾನಿ ಅಭ್ಯರ್ಥಿ ಯಾರು ಹಾಗೂ ಮಹಾಮೈತ್ರಿಯ ನಾಯಕರು ಯಾರು ಎಂಬುದನ್ನು ತಿಳಿಯಲು ಬಯಸುವುದಾಗಿ ಹೇಳಿದರು.

ಗುಜರಾತಿನಲ್ಲಿ 'ಮೇರಾ ಪರಿವಾರ್ ಬಾಜಪ ಪರಿವಾರ್ ' ಅಭಿಯಾನವನ್ನುದ್ದೇಶಿಸಿ ಮಾತನಾಡಿದ ಅವರು, ನರೇಂದ್ರ ಮೋದಿ ಪ್ರಧಾನಿಯಾಗಿ ಮುಂದುವರೆಯಲು ಬಹುಮತದ ಸರ್ಕಾರದ ಅಗತ್ಯವಾಗಿದೆ ಎಂದರು.

ಮಾಜಿ ಪ್ರಧಾನಿ ದೇವೇಗೌಡ ಗುಜರಾತಿನಲ್ಲಿ ಅಥವಾ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಹಾರಾಷ್ಟ್ರದಲ್ಲಿ, ಅಖಿಲೇಶ್ ಯಾದವ್ ಕೇರಳದಲ್ಲಿ ಭಾಷಣ ಮಾಡಿದ್ದರೆ ಏನು ಆಗುತ್ತದೆ ? ಅವರು ರಾಜ್ಯಮಟ್ಟದ ನಾಯಕರಾಗಿರುವುದರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.

ಇಂತಹ ರಾಜ್ಯಮಟ್ಟದ ನಾಯಕರ   ಬಗ್ಗೆ ಚಿಂತಿಸದೆ ಪಕ್ಷದ ಕಾರ್ಯಕರ್ತರು ಜನರ ಬಳಿ ತೆರಳಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮರಳಿ ಪ್ರಧಾನಿಯನ್ನಾಗಿಸುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಕರೆ ನೀಡಿದರು.

ಮೋದಿ ಅವರೇ ಎನ್ ಡಿಎ ಅಭ್ಯರ್ಥಿಯಾಗಲಿದ್ದು, ಅವರೇ ನಾಯಕತ್ವ ವಹಿಸಲಿದ್ದಾರೆ ಆದರೆ, ಮಹಾಘಟಬಂದನ್  ಪ್ರಧಾನಿ ಅಭ್ಯರ್ಥಿ ಯಾರು, ನಾಯಕತ್ವ ಯಾರು ವಹಿಸಿಕೊಳ್ಳಲಿದ್ದಾರೆ. ದೇಶವನ್ನು ಯಾರು ಮುನ್ನಡೆಸಲಿದ್ದಾರೆ ಎಂಬುದುರ ಬಗ್ಗೆ ಸ್ಪಷ್ಟನೆ ನೀಡುವಂತೆ ಪ್ರತಿಪಕ್ಷಗಳ ನಾಯಕರನ್ನು ಕೇಳಲು ಬಯಸುವುದಾಗಿ ಅಮಿತ್ ಶಾ ಹೇಳಿದರು.
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp