ಪುಲ್ವಾಮಾ ಎನ್ ಕೌಂಟರ್: ಇಬ್ಬರು ಯೋಧರು ಹುತಾತ್ಮ, ಓರ್ವ ಉಗ್ರನ ಹತ್ಯೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಪುಲ್ವಾಮ ಎನ್ಕೌಂಟರ್ ನಲ್ಲಿ ಇಬ್ಬರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

Published: 12th February 2019 12:00 PM  |   Last Updated: 12th February 2019 02:54 AM   |  A+A-


Pulwama Encounter: Two soldiers, one militant killed; internet snapped

ಸಂಗ್ರಹ ಚಿತ್ರ

Posted By : SVN SVN
Source : Online Desk
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಪುಲ್ವಾಮ ಎನ್ಕೌಂಟರ್ ನಲ್ಲಿ ಇಬ್ಬರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

ಪುಲ್ವಾಮದ ರತ್ನಿಪೋರಾ ಪ್ರಾಂತ್ಯದಲ್ಲಿ ಉಗ್ರರು ಅಡಗಿರುವ ಕುರಿತು ಮಾಹಿತಿ ಪಡೆದ ಸೈನಿಕರು ಕೂಡಲೇ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಸೈನಿಕರ ಮೇಲೆ ಉಗ್ರರು ಗುಂಡಿನ ಸುರಿಮಳೆ ಗೈದಿದ್ದಾರೆ. ಈ ವೇಳೆ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ. ಅಂತೆಯೇ ಓರ್ವ ಉಗ್ರನನ್ನು ಹತ್ಯೆಗೈಯ್ಯುವಲ್ಲಿ ಸೈನಿಕರು ಯಶಸ್ವಿಯಾಗಿದ್ದಾರೆ. 

ಸೇನೆಯ 50 ರಾಷ್ಟ್ರೀಯ ರೈಫಲ್ಸ್ ಹಾಗೂ 10 ಪಾರಾಗಣ ಮತ್ತು ಸಿಆರ್ ಪಿಎಫ್ ಯೋಧರು ಜಂಟಿ ಕಾರ್ಯಚರಣೆ ನಡೆಸಿದ್ದು, ಎನ್ಕೌಂಟರ್ ಮುಂದುವರೆದಿದೆ.

ಇನ್ನು ಎನ್ಕೌಂಟರ್ ನಲ್ಲಿ ಹುತಾತ್ಮರಾದ ಯೋಧರನ್ನು ಸೆಪೋಯ್ ಬಲ್ಜಿತ್ ಸಿಂಗ್, ನಾಯಕ್ ಸನೀದ್ ಎಂದು ಗುರುತಿಸಲಾಗಿದೆ. ಅಂತೆಯೇ ಗಾಯಗೊಂಡ ಸೈನಿಕರನ್ನು ಹವಾಲ್ಜಾರ್ ಚಂದ್ರಪಾಲ್ ಎಂದು ಸೇನಾಧಿಕಾರಿಗಳು ಮಾಹಿತಿ ನೀಡಿದ್ದಾರೆ. 
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp