ಉಗ್ರರ ಅಟ್ಟಹಾಸಕ್ಕೆ ಸೇನೆ ಎದೆಗುಂದದು: ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ

ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಗುರುವಾರ ಸಿಆರ್‍ ಪಿಎಫ್ ಯೋಧರ ಮೇಲಿನ ಉಗ್ರರ ದಾಳಿಯನ್ನು ರಾಜ್ಯಪಾಲ ಸತ್ಯಪಾಲ್ ಮಲಿಕ್ ಖಂಡಿಸಿದ್ದು....

Published: 14th February 2019 12:00 PM  |   Last Updated: 14th February 2019 10:17 AM   |  A+A-


Attack on CRPF convoy seems to be guided from across border, says Jammu and Kashmir Governor

ಘಟನೆ ನಡೆದ ಸ್ಥಳದಲ್ಲಿ ಭದ್ರತಾ ಸಿಬ್ಬಂದಿ

Posted By : LSB LSB
Source : UNI
ಜಮ್ಮು: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಗುರುವಾರ ಸಿಆರ್‍ ಪಿಎಫ್ ಯೋಧರ ಮೇಲಿನ ಉಗ್ರರ ದಾಳಿಯನ್ನು ರಾಜ್ಯಪಾಲ ಸತ್ಯಪಾಲ್ ಮಲಿಕ್ ಖಂಡಿಸಿದ್ದು, ಇಂತಹ ಅಟ್ಟಹಾಸಕ್ಕೆ ಭಾರತೀಯ ಸೇನೆ ಎದೆಗುಂದುವುದಿಲ್ಲ ಎಂದು ಹೇಳಿದ್ದಾರೆ.

ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಕ್ಕೆ ಸಾಂತ್ವನ ಹೇಳಿರುವ ಅವರು, ಆಸ್ಪತ್ರೆಗೆ ದಾಖಲಾಗಿರುವ ಸೈನಿಕರ ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ. 

ಉಗ್ರರ ದಾಳಿಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ರಾಜ್ಯಪಾಲರು, ಜೈಷೆ ಇ ಮೊಹಮದ್ ಸಂಘಟನೆಯ ಪೈಶಾಚಿಕ ಕೃ‍ತ್ಯಕ್ಕೆ ಗಡಿಯಂಚಿನ ಮಾರ್ಗದರ್ಶನ ದೊರಕಿರಬಹುದು. ಇಂತಹ ನಿರಂಕುಶ ಶಕ್ತಿಗಳಿಗೆ ತಕ್ಕ ಉತ್ತರ ಸಿಗಲಿದೆ ಎಂದು ಹೇಳಿದ್ದಾರೆ.

ಜಮ್ಮು ಕಾಶ್ಮೀರದೆಲ್ಲಡೆ ಹದ್ದಿನ ಕಣ್ಣಿಡುವಂತೆ ಭದ್ರತಾ ಪಡೆಗಳಿಗೆ ಸೂಚಿಸಿರುವ ರಾಜ್ಯಪಾಲರು, ಪ್ರತಿಯೊಂದು ಅಂಶಗಳ ಬಗ್ಗೆ ಜಿಲ್ಲಾ ವಿಭಾಗೀಯ ನಾಗರಿಕ ಹಾಗೂ ಪೊಲೀಸ್ ಆಡಳಿತಕ್ಕೆ ಮಾಹಿತಿ ನೀಡುವಂತೆ ಸಲಹೆ ನೀಡಿದ್ದಾರೆ.
Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
facebook twitter whatsapp