ಮೋದಿ ಮತ್ತೆ ಪ್ರಧಾನಿಯಾದರೆ ದೇಶದ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳು ನಾಶ- ಯೆಚೂರಿ

ನರೇಂದ್ರ ಮೋದಿ ಮತ್ತೆ ಪ್ರಧಾನಿಯಾದರೆ ದೇಶದಲ್ಲಿನ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳು ನಾಶ ಹೊಂದಲಿವೆ ಎಂದು ಸಿಪಿಐ-ಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಹೇಳಿದ್ದಾರೆ.
ಯೆಚೂರಿ, ಪ್ರಧಾನಿ ಮೋದಿ
ಯೆಚೂರಿ, ಪ್ರಧಾನಿ ಮೋದಿ

ಕೇರಳ: ನರೇಂದ್ರ ಮೋದಿ ಮತ್ತೆ ಪ್ರಧಾನಿಯಾದರೆ ದೇಶದಲ್ಲಿನ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳು ನಾಶ ಹೊಂದಲಿವೆ ಎಂದು ಸಿಪಿಐ-ಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಹೇಳಿದ್ದಾರೆ.

ಕೇಂದ್ರ ಸರ್ಕಾರದ ವೈಫಲ್ಯ ವಿರೋಧಿಸಿ ಉತ್ತರ ಕೇರಳ ವಲಯದಲ್ಲಿ ಕೇರಳ ಸಂರಕ್ಷಣಾ ಯಾತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಯೆಚೂರಿ,  ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಸಾಂವಿಧಾನಿಕ ಸಂಸ್ಥೆಗಳು ನಾಶ ಹೊಂದಲಿದ್ದು, ಸಮಾಜದಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ದೊಡ್ಡ ಕಂದಕ ನಿರ್ಮಾಣವಾಗಲಿದೆ ಎಂದರು.

ಪುಲ್ವಾಮಾ ದಾಳಿ ಕುರಿತು ಮಾತನಾಡಿದ ಯೆಚೂರಿ, ಇದೊಂದು ಉಗ್ರರ ದಾಳಿಯಾಗಿದ್ದು,  ರಾಜಕೀಯ ಲಾಭಕ್ಕಾಗಿ ಕೋಮುವಾದೀಕರಿಸಬಾರದು, ಭಯೋತ್ಪಾದನೆ ವಿರುದ್ಧ ದೇಶ ಒಂದೇ ನಿಲುವು ತಾಳಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಮುಂಬರುವ ಲೋಕಸಭಾ ಚುನಾವಣೆ ಮೇಲೆ ಶಬರಿಮಲೆ ವಿವಾದ  ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ, ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಹಾಗೂ ಬಿಜೆಪಿ ಕಮ್ಯೂನಿಸ್ಟ್ ಪಕ್ಷಕ್ಕೆ ಪ್ರತಿಸ್ಪರ್ಧಿಗಳಾಗಿವೆ ಎಂದು ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com