ಕಾಶ್ಮೀರ: ಎಲ್ಒಸಿ ಬಳಿ ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್

ಪುಲ್ವಾಮ ಉಗ್ರ ದಾಳಿಯ ಬೆನ್ನಲ್ಲೇ ಪಾಕಿಸ್ತಾನ ಸೇನೆ ಮಂಗಳವಾರ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಜಮ್ಮು ಮತ್ತು ಕಾಶ್ಮೀರದ ರಾಜೋರಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಶ್ರೀನಗರ: ಪುಲ್ವಾಮ ಉಗ್ರ ದಾಳಿಯ ಬೆನ್ನಲ್ಲೇ ಪಾಕಿಸ್ತಾನ ಸೇನೆ ಮಂಗಳವಾರ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಜಮ್ಮು ಮತ್ತು ಕಾಶ್ಮೀರದ ರಾಜೋರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.
ಇಂದು ಸಂಜೆ 7 ಗಂಟೆಯ ಸುಮಾರಿಗೆ ರಾಜೋರಿ ಜಿಲ್ಲೆಯ ನೌಶೆರಾ ಸೆಕ್ಟರ್ ನಲ್ಲಿ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಆದರೆ ಯಾವುದೇ ಸಾವು ಸಂಭವಿಸಿಲ್ಲ ಎಂದು ಸೇನಾ ಮೂಲಗಳು ತಿಳಿಸಿವೆ.
ಪಾಕ್ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತ ಸಹ ತಕ್ಕ ಪ್ರತಿಕ್ರಿಯೆ ನೀಡಿದೆ.
ಕಳೆದ ಫೆಬ್ರವರಿ 14ರಂದು ಪುಲ್ವಾಮಾದಲ್ಲಿ ಸಿಆರ್‌ಪಿಎಫ್‌ ಯೋಧರ ವಾಹನದ ಮೇಲೆ ಪಾಕ್‌ ಪ್ರಾಯೋಜಿತ ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆ ದಾಳಿ ನಡೆಸಿ 40ಕ್ಕೂ ಹೆಚ್ಚು ಯೋದರನ್ನು ಬಲಿ ತೆಗೆದುಕೊಂಡಿತ್ತು. ಮಾರನೇ ದಿನ ಗಡಿಯಲ್ಲಿ ಪಾಕ್ ಪಡೆಗಳು ಕದನ ವಿರಾಮ ಉಲ್ಲಂಘಿಸಿದ್ದವು. ಮೆಂಧಾರ್ ಮತ್ತು ಪೂಂಛ್ ಜಿಲ್ಲೆಗಳ ಗಡಿ ಭಾಗದಲ್ಲಿ ಪಾಕ್ ಪಡೆಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿವೆ. ಈಗ ಪಾಕ್ ಸೇನೆ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com