ರಾಜಸ್ತಾನ: ಮದುವೆ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್ ಹರಿದು 13 ಸಾವು, 18 ಮಂದಿಗೆ ಗಾಯ

ವೇಗವಾಗಿ ಬರುತ್ತಿದ್ದ ಟ್ರಕ್ ಮದುವೆ ಕಾರ್ಯಕ್ರಮದಲ್ಲಿ ಮೆರವಣಿಗೆ ಹೋಗುತ್ತಿದ್ದವರ ...

Published: 19th February 2019 12:00 PM  |   Last Updated: 19th February 2019 11:45 AM   |  A+A-


Representational image

ಸಾಂದರ್ಭಿಕ ಚಿತ್ರ

Posted By : SUD SUD
Source : Online Desk
ಪ್ರತಾಪ್ ಗರ್(ರಾಜಸ್ತಾನ): ವೇಗವಾಗಿ ಬರುತ್ತಿದ್ದ ಟ್ರಕ್ ಮದುವೆ ಕಾರ್ಯಕ್ರಮದಲ್ಲಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಹರಿದ ಪರಿಣಾಮ 13 ಮಂದಿ ಮೃತಪಟ್ಟು 18 ಜನರು ಗಾಯಗೊಂಡಿರುವ ಘಟನೆ ರಾಜಸ್ತಾನದ ಪ್ರತಾಪ್ ಗರ್ ಜಿಲ್ಲೆಯಲ್ಲಿ ಕಳೆದ ತಡರಾತ್ರಿ ನಡೆದಿದೆ.

ರಾಜ್ಯ ಹೆದ್ದಾರಿ 113ರ ರಾಮದೇವ ದೇವಸ್ಥಾನ ಬಳಿ ಈ ಅಪಘಾತ ಸಂಭವಿಸಿದ್ದು ನಿಂಬಹೆರಾದಿಂದ ಬಾನ್ಸ್ವಾರಾಕ್ಕೆ ಹೋಗುತ್ತಿದ್ದ ಟ್ರಕ್ ರಸ್ತೆ ಬದಿ ಹೋಗುತ್ತಿದ್ದ ಮದುವೆ ಮೆರವಣಿಗೆಯ ಜನರ ಮೇಲೆ ಹರಿದು ಈ ದುರ್ಘಟನೆ ಸಂಭವಿಸಿದೆ ಎಂದು ಚೋಟಿ ಸದ್ರಿ ಡಿಎಸ್ ಪಿ ವಿಜಯ್ ಪಾಲ್ ಸಿಂಗ್ ಸಂಧು ತಿಳಿಸಿದ್ದಾರೆ.

ಅಪಘಾತದ ವಿಷಯ ಕೇಳಿ ತೀವ್ರ ದುಃಖವಾಗಿದೆ. ಮೃತ ಕುಟುಂಬ ಸದಸ್ಯರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಹೇಳಿದ್ದಾರೆ.

ಗಾಯಗೊಂಡವರನ್ನು ಚೋಟಿ ಸದ್ರಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಗಾಯಗೊಂಡವರನ್ನು ಉದೈಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಗ್ಗೆ ತನಿಖೆ ನಡೆಯುತ್ತಿದೆ.
Stay up to date on all the latest ರಾಷ್ಟ್ರೀಯ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp