ನವದೆಹಲಿ: ನೆರೆ ರಾಷ್ಟ್ರ ಪಾಕಿಸ್ತಾನ ಭೇಟಿ ನಂತರ ಸೌದಿ ಅರೇಬಿಯಾದ ರಾಜ ಮೊಹಮ್ಮದ್ ಬಿನ್ ಸಲ್ಮಾನ್ ಫೆ.19 ರಂದು ಭಾರತಕ್ಕೆ ಆಗಮಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಶಿಷ್ಟಾಚಾರವನ್ನು ಬದಿಗೊತ್ತಿ ವಿಮಾನ ನಿಲ್ದಾಣಕ್ಕೆ ತೆರಳಿ ಸೌದಿ ಅರೇಬಿಯಾ ರಾಜನನ್ನು ಸ್ವಾಗತಿಸಿದ್ದಾರೆ.
ಇದೇ ಮೊದಲಬಾರಿಗೆ ಸೌದಿ ಅರೇಬಿಯಾ ರಾಜ ಭಾರತಕ್ಕೆ ಭೇಟಿ ನೀಡಿದ್ದು, ಉಭಯ ರಾಷ್ಟ್ರಗಳ ದ್ವಿಪಕ್ಷೀಯ ಸಂಬಂಧದಲ್ಲಿ ಮಹತ್ವವಾದ ಅಧ್ಯಾಯ ಪ್ರಾರಂಭವಾಗಲಿದೆ ಎಂದು ವಿದೇಶಾಂಗ ಇಲಾಖೆ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ.
ಭಾರತದಲ್ಲಿ ಸೌದಿ ಅರೇಬಿಯಾ ರಾಜ 2 ದಿನಗಳ ಕಾಲ ಇರಲಿದ್ದು, ದ್ವಿಪಕ್ಷೀಯ ಮಾತುಕತೆ ವೇಳೆ ಭಾರತ ಭಯೋತ್ಪಾದನೆ ವಿರುದ್ಧದ ಹೋರಾಟದ ಕುರಿತಂತೆ ಸೌದಿ ಅರೇಬಿಯಾ ಜೊತೆ ಮಾತನಾಡಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.