ಪುಲ್ವಾಮಾ ದಾಳಿಗೆ ಪ್ರತೀಕಾರ: ಇಬ್ಬರು ಜೈಷ್ ಉಗ್ರರು ಸೇನಾಪಡೆ ಎನ್ ಕೌಂಟರ್ ಗೆ ಬಲಿ

ಪುಲ್ವಾಮಾ ದಾಳಿಯ ರೂವಾರಿಯಾಗಿದ್ದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

Published: 22nd February 2019 12:00 PM  |   Last Updated: 22nd February 2019 10:20 AM   |  A+A-


Jammu and Kashmir: 2 top Jaish terrorists gunned down by security forces in Baramulla encounter

ಪುಲ್ವಾಮಾ ದಾಳಿಗೆ ಪ್ರತೀಕಾರ: ಇಬ್ಬರು ಜೈಷ್ ಉಗ್ರರು ಸೇನಾಪಡೆ ಎನ್ ಕೌಂಟರ್ ಗೆ ಬಲಿ

Posted By : RHN RHN
Source : ANI
ಬಾರಾಮುಲ್ಲಾ: ಪುಲ್ವಾಮಾ ದಾಳಿಯ ರೂವಾರಿಯಾಗಿದ್ದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

ಜಮ್ಮು ಕಾಶ್ಮೀರದ ಸೋಪೊರದಲ್ಲಿ ಗುರುವಾರ ರಾತ್ರಿಯಿಂದ ಪ್ರಾರಂಭವಾಗಿದ್ದ ಎನ್ ಕೌಂಟರ್ ನಲ್ಲಿ ಇದುವರೆಗೆ ಸೇನಾಪಡೆ ಇಬ್ಬರು ಉಗ್ರರನ್ನು ಹತ್ಯೆಗೈದಿದೆ.ಅಲ್ಲದೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸಹ ವಶಕ್ಕೆ ಪಡೆಯಲಾಗಿದೆ..

"ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದಾರೆ. ಉಗ್ರರ ಗುರುತು ಪತ್ತೆಯಾಗಿಲ್ಲ. ಸೇನಾಪಡೆಯ ಯಾವ ಯೋಧರಿಗೆಗಾಯವಾಗಿಲ್ಲ" ಎಂದು ದಕ್ಷಿಣ ಕಾಶ್ಮೀರದ ಡಿಐಜಿ ಅತುಲ್‌ ಕುಮಾರ್‌ ಗೋಯಲ್‌  ಎ.ಎನ್.ಐ. ಗೆ ಮಾಹಿತಿ ನೀಡಿದ್ದಾರೆ.

ಈ ಭಾಗದಲ್ಲಿ ಉಗ್ರರು ಸಕ್ರಿಯರಾಗಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸೇನಾಪಡೆ ಉಗ್ರರ ಶೋಧಕಾರ್ಯ ನಡೆಸಿದೆ. ಈ ವೇಳೆ ಉಗ್ರರು ಸೇನಾಪಡೆ ಮೇಲೆ ಗುಂಡು ಹಾರಿಸಿದ್ದಾರೆ. ಪ್ರತಿಯಾಗಿ ಸೇನಾಪಡೆ ಯೋಧರು ದಾಳಿ ನಡೆಸಿ ಇಬ್ಬರು ಉಗ್ರರನ್ನು ಕೊಂದಿದ್ದಾರೆ.

ಫೆ. ೧೪ರಂದು ಪುಲ್ವಾಮಾದಲ್ಲಿ ಜೈಷ್ ಸಂಘಟನೆಯ ಆತ್ಮಾಹುತಿ ಬಾಂಬರ್ ನಡೆಸಿದ್ದ ಉಗ್ರ ದಾಳಿಯಲ್ಲಿ ನಲವತ್ತಕ್ಕೆ ಹೆಚ್ಚು ಯೋಧರು ಹುತಾತ್ಮರಾಗಿದ್ದರು.
Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
facebook twitter whatsapp