ಏರ್ ಇಂಡಿಯಾ ವಿಮಾನ ಹೈಜಾಕ್ ಬೆದರಿಕೆ, ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್

ಪುಲ್ವಾಮ ಉಗ್ರ ದಾಳಿಯ ಬೆನ್ನಲ್ಲೇ ಏರ್ ಇಂಡಿಯಾ ವಿಮಾನ ಹೈಜಾಕ್ ಮಾಡುವುದಾಗಿ ಮುಂಬೈ ನಿಯಂತ್ರಣ ಕೇಂದ್ರಕ್ಕೆ ಕರೆ ಬಂದಿದ್ದು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಪುಲ್ವಾಮ ಉಗ್ರ ದಾಳಿಯ ಬೆನ್ನಲ್ಲೇ ಏರ್ ಇಂಡಿಯಾ ವಿಮಾನ ಹೈಜಾಕ್ ಮಾಡುವುದಾಗಿ ಮುಂಬೈ ನಿಯಂತ್ರಣ ಕೇಂದ್ರಕ್ಕೆ ಕರೆ ಬಂದಿದ್ದು, ದೇಶದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಮುಂಬೈನ ವಿಮಾನ ನಿಲ್ದಾಣದ ಏರ್ ಇಂಡಿಯಾ ಆಪರೇಷನ್ ಕಂಟ್ರೋಲ್ ಸೆಂಟರ್ ಗೆ ದೂರವಾಣಿ ಸಂದೇಶ ಬಂದಿದ್ದು, ಭಾರತೀಯ ವಿಮಾನಗಳನ್ನು ಪಾಕಿಸ್ತಾನಕ್ಕೆ ಹೈಜಾಕ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ನಾಗರಿಕ ವಿಮಾನಯಾನ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆದರಿಕೆ ಕರೆ ಹಿನ್ನೆಲೆಯಲ್ಲಿ ಎಲ್ಲಾ ವಿಮಾನಯಾನ ಸಂಸ್ಥೆಗಳಿಗೆ ಮತ್ತು ಸಿಐಎಸ್ಎಫ್ ಸಿಬ್ಬಂದಿಗೆ ಭದ್ರತೆ ಬಿಗಿಗೊಳಿಸುವಂತೆ ಸೂಚಿಸಲಾಗಿದೆ.
ಎಪಿಎಸ್ ಯು(ವಿಮಾನ ನಿಲ್ದಾಣ ಭದ್ರತಾ ಘಟಕ), ಎಎಸ್ ಜಿ(ವಿಮಾನಯಾನ ಭದ್ರತಾ ತಂಡ) ಮತ್ತು ಎಲ್ಲಾ ವಿಮಾನ ನಿಲ್ದಾಣಗಳಿಗೂ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com