ಕಾಶ್ಮೀರಿಗಳ ಮೇಲಿನ ದಾಳಿ ಬಗ್ಗೆ ಮೌನ ಮುರಿದ ಪ್ರಧಾನಿಗೆ ಒಮರ್ ಅಭಿನಂದನೆ

ಪುಲ್ವಾಮಾ ದಾಳಿ ನಂತರ ದೇಶದ ವಿವಿಧೆಡೆ ನಡೆಯುತ್ತಿದ್ದ ಕಾಶ್ಮೀರಿಗಳ ಮೇಲಿನ ದಾಳಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದಿದ್ದು, ಮುಂದೆ ಇಂತಹ ಘಟನೆಗಳು ಮರುಕಳಿಸುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಒಮರ್ ಅಬ್ದುಲ್ಲಾ
ಒಮರ್ ಅಬ್ದುಲ್ಲಾ

ಜಮ್ಮು-ಕಾಶ್ಮೀರ: ಪುಲ್ವಾಮಾ ದಾಳಿ ನಂತರ ದೇಶದ ವಿವಿಧೆಡೆ ನಡೆಯುತ್ತಿದ್ದ ಕಾಶ್ಮೀರಿಗಳ ಮೇಲಿನ ದಾಳಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದಿದ್ದು, ಮುಂದೆ ಇಂತಹ ಘಟನೆಗಳು ಮರುಕಳಿಸುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಹೇಳಿಕೆಗೆ  ಜಮ್ಮು- ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅಭಿನಂದನೆ ಸಲ್ಲಿಸಿದ್ದಾರೆ. ನಮ್ಮ  ಹೃದಯದ ಭಾವನೆಗಳಿಗೆ ಸ್ಪಂದಿಸಿದ ನರೇಂದ್ರ ಮೋದಿಗೆ ಕೃತಜ್ಞತೆ ಸಲ್ಲಿಸುವುದಾಗಿ ಅವರು  ಟ್ವೀಟ್ ಮಾಡಿದ್ದಾರೆ.

ರಾಜಸ್ತಾನದ ಟೊಂಕ್ ಜಿಲ್ಲೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಾಶ್ಮೀರಿಗಳ ವಿರುದ್ಧ ನಮ್ಮ ಹೋರಾಟವಲ್ಲ ಎಂದಿದ್ದರು.

ಪುಲ್ವಾಮಾ ದಾಳಿ ನಡೆದು ಒಂದು ವಾರ ಕಳೆದಿದ್ದರೂ ಕಾಶ್ಮೀರಿಗಳು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಬೇಕಾಗಿದೆ. ಕಡೆಗೂ ಪ್ರಧಾನಿ ನರೇಂದ್ರ ಮೋದಿ, ಕಾಶ್ಮೀರಿಗಳ ಮೇಲೆ ದಾಳಿ ನಡೆಸದಂತೆ ಹೇಳಿದ್ದಾರೆ ಎಂದು ನ್ಯಾಷನಲ್ ಕಾನ್ಪರೆನ್ಸ್ ನಾಯಕ  ಒಮರ್ ಅಬ್ದುಲ್ಲಾ ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com