ಲೋಕಸಭೆ ಚುನಾವಣೆ: ಸಿಎಂಪಿ ಕಾರ್ಯತಂತ್ರ ರೂಪಿಸಲು ಪ್ರತಿಪಕ್ಷಗಳಿಂದ ನಾಳೆ ಸಭೆ

ಲೋಕಸಭೆ ಚುನಾವಣೆಯ ಪೂರ್ವಸಿದ್ಧತೆಯಾಗಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಜಾರಿಗೆ ತರಲು ...

Published: 26th February 2019 12:00 PM  |   Last Updated: 26th February 2019 09:27 AM   |  A+A-


Congress President Rahul Gandhi with TDP chief N Chandrababu Naidu, NCP President Sharad Pawar, CPI's D Raja, Sharad Yadav, SP's Ram Gopal Yadav and DMK leader Kanimozhi at a press conference in New Delhi.

ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳ ನಾಯಕರು

Posted By : SUD SUD
Source : PTI
ನವದೆಹಲಿ; ಲೋಕಸಭೆ ಚುನಾವಣೆಯ ಪೂರ್ವಸಿದ್ಧತೆಯಾಗಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಜಾರಿಗೆ ತರಲು ವಿರೋಧ ಪಕ್ಷಗಳ ನಾಯಕರು ನಾಳೆ ದೆಹಲಿಯಲ್ಲಿ ಸಭೆ ಸೇರಿ ಚರ್ಚೆ ನಡೆಸಿ ಯೋಜನೆ ರೂಪಿಸಲಿದ್ದಾರೆ.

ಪಾರ್ಲಿಮೆಂಟ್ ಹೌಸ್ ಲೈಬ್ರೆರಿಯಲ್ಲಿ ಎಲ್ಲಾ ಪ್ರತಿಪಕ್ಷಗಳ ನಾಯಕರನ್ನು ಆಹ್ವಾನಿಸಲಾಗಿದ್ದು ಲೋಕಸಭೆ ಚುನಾವಣೆಯಲ್ಲಿ ಸಾಮೂಹಿಕವಾಗಿ ಕಾರ್ಯತಂತ್ರ ರೂಪಿಸಿ ಬಿಜೆಪಿ ವಿರುದ್ಧ ಹೋರಾಡುವ ಕುರಿತು ಚರ್ಚೆ ನಡೆಸಲಿದ್ದಾರೆ.

ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ವಿರೋಧ ಪಕ್ಷಗಳು ಚುನಾವಣಾ ಕಾರ್ಯತಂತ್ರ ರೂಪಿಸಲಿದೆ. ಪುಲ್ವಾಮಾ ಭಯೋತ್ಪಾದಕ ದಾಳಿಯ ಕುರಿತು ಸಹ ವಿರೋಧ ಪಕ್ಷಗಳು ಚರ್ಚೆ ನಡೆಸಿ ಕಾರ್ಯತಂತ್ರ ರೂಪಿಸಲಿವೆ.

ಕಾಂಗ್ರೆಸ್ ನೇತೃತ್ವದಲ್ಲಿ ಫೆಬ್ರವರಿ 13ರಂದು ನಡೆದ ವಿರೋಧ ಪಕ್ಷಗಳ ಸಭೆಯಲ್ಲಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳನ್ನು ರೂಪಿಸುವ ಕುರಿತು ನಿರ್ಧಾರ ಮಾಡಿಕೊಂಡಿದ್ದರು.
Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
'Nationalism', 'citizenship', 'demonetisation' among chapters dropped from CBSE syllabus

ಹಿರಿಯ ತರಗತಿಗಳ ಪಠ್ಯಕ್ರಮವನ್ನು 30% ರಷ್ಟು ಕಡಿಮೆ ಮಾಡುವ ಸಿಬಿಎಸ್‌ಇ ನಡೆ ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp