ಕಾಂಗ್ರೆಸ್ ಅವಧಿಯಲ್ಲೂ ಆರು ಬಾರಿ ಉಗ್ರರ ವಿರುದ್ಧ ದಾಳಿ ನಡೆಸಲಾಗಿತ್ತು: ಮಲ್ಲಿಕಾರ್ಜುನ್ ಖರ್ಗೆ

ಪಾಕಿಸ್ತಾನದ ಗಡಿಯೊಳಗೆ ನುಗ್ಗಿ 350ಕ್ಕು ಹೆಚ್ಚು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ವಾಯುಪಡೆಯನ್ನು ಶ್ಲಾಘಿಸಿದ ಕಾಂಗ್ರೆಸ್ ಸಂಸದೀಯ ನಾಯಕ...
ಮಲ್ಲಿಕಾರ್ಜುನ್ ಖರ್ಗೆ
ಮಲ್ಲಿಕಾರ್ಜುನ್ ಖರ್ಗೆ
ಕಲಬುರಗಿ: ಪಾಕಿಸ್ತಾನದ ಗಡಿಯೊಳಗೆ ನುಗ್ಗಿ 350ಕ್ಕು ಹೆಚ್ಚು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ವಾಯುಪಡೆಯನ್ನು ಶ್ಲಾಘಿಸಿದ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು, ನಾವು ಸದಾ ಸೈನಿಕರ ಬೆನ್ನಿಗಿದ್ದೇವೆ ಎಂದು ಹೇಳಿದ್ದಾರೆ.
ವಾಯುದಾಳಿಯ ಬಗ್ಗೆ ಸಂಪೂರ್ಣ ಮಾಹಿತಿ ದೊರಕಿಲ್ಲ.  ಆದರೆ ಪುಲ್ವಾಮಾ ದಾಳಿಗೆ ತಿರುಗೇಟು ನೀಡುವ ಮೂಲಕ ಅಮಾಯಕ ಭಾರತೀಯರ ಮೇಲಿನ ಭಯೋತ್ಪಾದನಾ ದಾಳಿಯನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ಸೇನೆ ರವಾನಿಸಿದೆ ಎಂದು ಅವರು ಹೇಳಿದ್ದಾರೆ.
ಸರ್ಜಿಕಲ್ ದಾಳಿ ಎಂಬುದು ನಿರಂತರ ಪ್ರಕ್ರಿಯೆ. ಈ ಹಿಂದಿನ ಎಲ್ಲ ಸರ್ಕಾರಗಳ ಅವಧಿಯಲ್ಲೂ ನಡೆದಿದೆ.  ಖಚಿತವಾಗಿ ಹೇಳಬೇಕೆಂದರೆ ಇಂತಹ ದಾಳಿ ನಡೆಸುವ ಬಗ್ಗೆ ಸೇನೆಯ ಉನ್ನತಾಧಿಕಾರಿ ನಿರ್ಧರಿಸುತ್ತಾರೆಯೇ ಹೊರತು ಸರ್ಕಾರವಲ್ಲ ಎಂದು ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಉಗ್ರರ ವಿರುದ್ಧ ಭಾರತೀಯ ಸೇನೆ ಕೈಗೊಂಡ ದಿಟ್ಟ ನಿರ್ಧಾರವನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿರುವ ಕಾಂಗ್ರೆಸ್‍, ದೇಶ ಮತ್ತು ಜನರ ರಕ್ಷಣೆಗಾಗಿ ಸೇನೆ ಕೈಗೊಳ್ಳುವ ಯಾವುದೇ ತೀರ್ಮಾನಕ್ಕೆ ಸಹಕಾರ ನೀಡುವುದಾಗಿ ಈಗಾಗಲೇ ತಿಳಿಸಿದೆ ಎಂದರು.
ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಆಡಳಿತಾವಧಿಯಲ್ಲಿ 6 ಬಾರಿ ಈ ರೀತಿಯ ದಾಳಿ ನಡೆಸಿ, ಬಾಂಗ್ಲಾದೇಶವನ್ನು ಪಾಕಿಸ್ತಾನದ ಹಿಡಿತದಿಂದ ಮುಕ್ತಗೊಳಿಸಲಾಗಿತ್ತು. ಭಾರತೀಯ ಸೇನೆಯು ಒಂದು ಲಕ್ಷಕ್ಕೂ ಅಧಿಕ ಪಾಕ್ ಸೈನಿಕರನ್ನು ಬಂಧಿಸಿತ್ತು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com