ಅಜಿತ್ ಧೋವಲ್ ರನ್ನು ಹಿಡಿದು ವಿಚಾರಣೆಗೆ ಒಳಪಡಿಸಿದರೆ 'ಪುಲ್ವಾಮ ದಾಳಿ' ಸತ್ಯ ಹೊರಬೀಳಲಿದೆ: ರಾಜ್ ಠಾಕ್ರೆ

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ರನ್ನು ಹಿಡಿದು ವಿಚಾರಣೆಗೆ ಒಳಪಡಿಸಿದರೆ ಪುಲ್ವಾಮ ಉಗ್ರ ದಾಳಿಯ ಸತ್ಯಾಸತ್ಯತೆ ಹೊರಬೀಳಲಿದೆ ಎಂದು ಮಹಾರಾಷ್ಚ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ರನ್ನು ಹಿಡಿದು ವಿಚಾರಣೆಗೆ ಒಳಪಡಿಸಿದರೆ ಪುಲ್ವಾಮ ಉಗ್ರ ದಾಳಿಯ ಸತ್ಯಾಸತ್ಯತೆ ಹೊರಬೀಳಲಿದೆ ಎಂದು ಮಹಾರಾಷ್ಚ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ.
ಪುಲ್ವಾಮ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಸಿಆರ್‌ಪಿಎಫ್ ಯೋಧರು 'ರಾಜಕೀಯ ಬಲಿಪಶು'ಗಳು ಎಂದು ಹೇಳಿರುವ ರಾಜ್ ಠಾಕ್ರೆ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ವಿಚಾರಣೆ ನಡೆಸಿದರೆ ಸತ್ಯ ಬಹಿರಂಗಗೊಳ್ಳಲಿದೆ ಎಂದು ಹೇಳಿದ್ದಾರೆ. 'ಒಂದು ವೇಳೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರನ್ನು ಪುಲ್ವಾಮ ಭಯೋತ್ಪಾದಕ ದಾಳಿ ಕುರಿತಂತೆ ವಿಚಾರಣೆ ನಡೆಸಿದರೆ, ಸತ್ಯ ಹೊರಬರಲಿದೆ. ಪುಲ್ವಾಮ ದಾಳಿ ಸಂದರ್ಭ ಪ್ರಧಾನಿ ಮೋದಿ ಅವರು ಕಾರ್ಬೆಟ್ ನ್ಯಾಶನಲ್ ಪಾರ್ಕ್ ನಲ್ಲಿ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದರು. ಭಯೋತ್ಪಾದಕ ದಾಳಿಯ ಸುದ್ದಿ ಹರಡಿದರೂ ಅವರು ಶೂಟಿಂಗ್ ಅನ್ನು ಮುಂದುವರಿಸಿದ್ದರು. ಇದನ್ನು ಗಮನಿಸಿದರೆ ಪುಲ್ವಾಮ ದಾಳಿಯ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿರಬಹುದು ಎಂಬ ಶಂಕೆ ಮೂಡುತ್ತದೆ ಎಂದು ರಾಜ್ ಠಾಕ್ರೆ ಹೇಳಿದ್ದಾರೆ.
'ಪುಲ್ವಾಮ ದಾಳಿಯಲ್ಲಿ ಮೃತಪಟ್ಟ ಸಿಆರ್ ಪಿಎಫ್ ನ 40 ಯೋಧರು ರಾಜಕೀಯ ಬಲಿಪಶುಗಳು. ಎಲ್ಲ ಸರ್ಕಾರದ ಆಡಳಿತದ ಅಡಿಯಲ್ಲಿ ಇಂತಹ ಘಟನೆಗಳು ನಡೆಯುತ್ತಿರುತ್ತವೆ. ಆದರೆ, ಮೋದಿ ಸರ್ಕಾರದ ಆಡಳಿತದ ಅಡಿಯಲ್ಲಿ ಇಂತಹ ಘಟನೆಗಳು ಹೆಚ್ಚು ನಡೆಯುತ್ತಿವೆ ಎಂದು ರಾಜ್ ಠಾಕ್ರೆ ಹೇಳಿದ್ದಾರೆ.
ಇನ್ನು ರಾಜ್ ಠಾಕ್ರೆ ಅವರ ಈ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿಯ ರಾಜ್ಯ ವಕ್ತಾರ ಮಾಧವ್ ಭಂಡಾರಿ, 'ರಾಜ್ ಠಾಕ್ರೆ ಅವರು ತನ್ನ ಜೀವನದುದ್ದಕ್ಕೂ ಮಿಮಿಕ್ರಿ ಮಾಡುತ್ತಾ ಬಂದವರು. ಈಗ ಅವರು ರಾಹುಲ್ ಗಾಂಧಿ ಪರವಾಗಿ ಧೋವಲ್ ವಿರುದ್ಧ ಆರೋಪ ಮಾಡುತ್ತಿದ್ದಾರೆ.’’ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com