ಅಭಿನಂದನ್ ಬಿಡುಗಡೆ ವಿಚಾರದಲ್ಲಿ ಇಮ್ರಾನ್ ಖಾನ್ ರಾಜಕೀಯ ನಿಪುಣರಂತೆ ವರ್ತನೆ- ಮೆಹಬೂಬಾ

ಭಾರತೀಯ ವಿಂಗ್ ಕಮಾಂಡರ್ ಅಭಿನಂದನ್ ನಾಳೆ ಬಿಡುಗಡೆಯಾಗುತ್ತಿರುವುದು ಒಳ್ಳೆಯ ಸುದ್ದಿಯಾಗಿದ್ದು, ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ರಾಜಕೀಯ ಪ್ರಬುದ್ಧತೆ ಮೆರೆದಿದ್ದಾರೆ ಎಂದು ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಪ್ತಿ ಶ್ಲಾಘಿಸಿದ್ದಾರೆ.
ಮೆಹಬೂಬಾ
ಮೆಹಬೂಬಾ

ಶ್ರೀನಗರ: ಭಾರತೀಯ ವಿಂಗ್ ಕಮಾಂಡರ್ ಅಭಿನಂದನ್ ನಾಳೆ ಬಿಡುಗಡೆಯಾಗುತ್ತಿರುವುದು ಒಳ್ಳೆಯ ಸುದ್ದಿಯಾಗಿದ್ದು, ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್  ರಾಜಕೀಯ ಪ್ರಬುದ್ಧತೆ ಮೆರೆದಿದ್ದಾರೆ ಎಂದು ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಪ್ತಿ ಶ್ಲಾಘಿಸಿದ್ದಾರೆ.

ಅಭಿನಂದನ್ ಬಿಡುಗಡೆಯಾಗುತ್ತಿರುವುದು ಅವರ ಕುಟುಂಬಕ್ಕೆ ಮಾತ್ರವಲ್ಲ, ಇಡೀ ದೇಶವೇ ಸಂತೋಷಗೊಂಡಿದ್ದು, ಇಮ್ರಾನ್ ಖಾನ್ ರಾಜಕೀಯ ನಿಪುಣ ರಂತೆ ಕಾರ್ಯನಿರ್ವಹಿಸಿದ್ದಾರೆ. ಅವರ ಈ ನಡೆ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಮೆಹಬೂಬಾ ಹೇಳಿದ್ದಾರೆ.

ಪಾಕಿಸ್ತಾನ ಹಾಗೂ ಭಾರತ ನಡುವಿನ ಪ್ರಕ್ಷುಬ್ದ ವಾತವಾರಣವನ್ನು ಕೇಂದ್ರ ಸರ್ಕಾರ ಬಗೆಹರಿಸಲಿದೆ ಎಂಬ ವಿಶ್ವಾಸವನ್ನು ಮೆಹಬೂಬಾ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ತನ್ನ ಮಾತಿಗೆ ಬದ್ಧರಾಗಿ ಇರುವ ವಿಶ್ವಾಸವಿದೆ. ಪುಲ್ವಾಮಾ ದಾಳಿಗೆ ಸಂಬಂಧಪಟ್ಟಂತೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ಇದೆ. ಇದ್ದರಿಂದಾಗಿ ಉಭಯ ದೇಶಗಳ ನಡುವಿನ ಪ್ರಕ್ಷುಬ್ದ ವಾತವಾರಣ ಅಂತ್ಯಗೊಂಡು ಶಾಂತಿ ನೆಲೆಸಲಿದೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಲಿದೆ ಎಂದು ಭಾವಿಸಿರುವುದಾಗಿ ಹೇಳಿದ್ದಾರೆ.

ಆದಾಗ್ಯೂ, ಗಡಿಯಾಚೆಗಿನ ಪ್ರಕ್ಷುಬ್ದ ಪರಿಸ್ಥಿತಿಯಿಂದಾಗಿ ಜಮ್ಮು-ಕಾಶ್ಮೀರದ ಬಹುತೇಕ ಜನತೆ ಆತಂಕದಲ್ಲಿ ಕಾಲ ಕಳೆಯುವಂತಾಗಿದೆ ಎಂದು ಮೆಹಬೂಬಾ  ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com