ಭಾರತ- ಪಾಕಿಸ್ತಾನ ನಡುವೆ ಬಿಗಡಾಯಿಸಿದ ಪರಿಸ್ಥಿತಿ: ಪರೋಕ್ಷವಾಗಿ ಮೋದಿ ವಿರುದ್ಧ ನಾಯ್ಡು ಕಿಡಿ

ಭಾರತ ಮತ್ತು ಪಾಕಿಸ್ತಾನ ನಡುವಣ ಪರಿಸ್ಥಿತಿ ಬಿಗಡಾಯಿಸುತ್ತಿರುವಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಾಗ್ದಾಳಿ ನಡೆಸಿದ್ದಾರೆ.
ಚಂದ್ರಬಾಬು ನಾಯ್ಡು
ಚಂದ್ರಬಾಬು ನಾಯ್ಡು

ಅಮರಾವತಿ: ಭಾರತ ಮತ್ತು ಪಾಕಿಸ್ತಾನ ನಡುವಣ ಪರಿಸ್ಥಿತಿ ಬಿಗಡಾಯಿಸುತ್ತಿರುವಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಾಗ್ದಾಳಿ ನಡೆಸಿದ್ದಾರೆ.

ಯಾವುದೇ ವ್ಯಕ್ತಿ ಸರ್ವಾಧಿಕಾರಿ ರೀತಿಯಲ್ಲಿ ವರ್ತಿಸಿದರೆ ತೊಂದರೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಕೇಂದ್ರ ಸರ್ಕಾರ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಒತ್ತಾಯಿಸಿದ್ದಾರೆ.

ಆಡಳಿತ ನಡೆಸುವವರು ದೇಶದ ಹಿತಸಕ್ತಿಗೆ ಅನುಗುಣವಾಗಿ ವರ್ತಿಸಿ, ದೇಶದ ಸಾರ್ವಭೌಮತ್ವವನ್ನು ರಕ್ಷಿಸಬೇಕು. ಯಾರೊಬ್ಬರು ರಾಜಕೀಯ ಲಾಭಕ್ಕಾಗಿ ಆಲೋಚಿಸದೆ ದೇಶದ ರಕ್ಷಣೆ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಪರೋಕ್ಷವಾಗಿ ಮೋದಿ ವಿರುದ್ಧ ನಾಯ್ಡು ಕಿಡಿಕಾರಿದ್ದಾರೆ.

ಪಾಕಿಸ್ತಾನ  ವಶದಲ್ಲಿರುವ ವಾಯುಪಡೆ ಪೈಲಟ್ ಅಭಿನಂದನ್ ವರ್ತಮಾನ್  ದೇಶಭಕ್ತಿ ಬಗ್ಗೆ ನಾಯ್ಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವರ ಮೇಲೆ ಹಲ್ಲೆ ನಡೆದಿದ್ದರೂ ಧೈರ್ಯವಾಗಿರುವ ಮೂಲಕ ನಮಗೆಲ್ಲರಿಗೂ ಸ್ಪೂರ್ತಿಯಾಗಿದ್ದಾರೆ. ಎಲ್ಲರೂ ಅವರ ಕುಟುಂಬದ ಪರವಾಗಿ ನಿಲ್ಲಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com