ಬುಲಂದ್'ಶೆಹರ್ ಪೊಲೀಸ್ ಹತ್ಯೆ ಪ್ರಕರಣ: ಅಧಿಕಾರಿಗೆ ಮಾರಾಕಾಸ್ತ್ರದಿಂದ ತಲೆಗೆ ಹೊಡೆದಿದ್ದ ಆರೋಪಿ ಬಂಧನ

ಬುಲಂದ್ ಶೆಹರ್ ಪೊಲೀಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ...

Published: 01st January 2019 12:00 PM  |   Last Updated: 01st January 2019 01:39 AM   |  A+A-


File photo

ಸಂಗ್ರಹ ಚಿತ್ರ

Posted By : MVN MVN
Source : The New Indian Express
ಲಖನೌ: ಬುಲಂದ್ ಶೆಹರ್ ಪೊಲೀಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. 

ಕಲೌವಾ ಎಂಬ ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿದೆ. ಹಿಂಸಾಚಾರದ ವೇಳೆ ಈತ ಕೂಡ ಸ್ಥಳದಲ್ಲಿದ್ದ ಎಂಬ ಖಚಿತ ಮಾಹಿತ ಲಭ್ಯವಾದ ಹಿನ್ನಲೆಯಲ್ಲಿ ಆತನನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಪ್ರಭಾಕರ್ ಚೌಧರಿಯವರು ಹೇಳಿದ್ದಾರೆ. 

ಹಿಂಸಾಚಾರದ ವೇಳೆ ಪೊಲೀಸ್ ಅಧಿಕಾರಿ ತಲೆಗೆ ಮಾರಾಕಾಸ್ತ್ರಗಳಿಂಗ ಕಲೌವಾ ಬಲವಾಗಿ ಹೊಡೆದಿದ್ದ. ಬಳಿಕ ಅಧಿಕಾರಿ ಮೇಲೆ ಗುಂಡು ಹಾರಿಸಲಾಗಿತ್ತು ಎಂದು ತಿಳಿಸಿದ್ದಾರೆ. 

ಪ್ರಸ್ತುತ ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿದ್ದು ವಿಚಾರಣೆಗೊಳಪಡಿಸಲಾಗಿದೆ ಎಂದಿದ್ದಾರೆ. 

ಕೆಲ ದಿನಗಳ ಹಿಂದಷ್ಟೇ ಉತ್ತರಪ್ರದೇಶದ ಬುಲಂದ್ಶೆಹರ್ ನಲ್ಲಿ ಗೋಹತ್ಯೆ ಸಂಬಂಧ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಪ್ರತಿಭಟನಾಕಾರರು ಪೊಲೀಸ್ ಠಾಣೆ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಿದ್ದರು, ಪರಿಣಾಮ ಘಟನೆಯಲ್ಲಿ ಪೊಲೀಸ್ ಅಧಿಕಾರಿ ಸುಬೋಧ್ ಕುಮಾರ್ ಸಿಂಗ್ ಅವರು ಮೃತಪಟ್ಟಿದ್ದರು. 

ಪ್ರಕರಣ ಸಂಬಂಧ ಡಿಸೆಂಬರ್ 28 ರಂದು ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದರು. ಪ್ರಕರಣ ಸಂಬಂಧ ಈವರೆಗೂ ಪೊಲೀಸರು 30 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆ. 
Stay up to date on all the latest ರಾಷ್ಟ್ರೀಯ news
Poll
RBI

ಕಾರ್ಪೊರೇಟ್‌ ಕಂಪನಿಗಳಿಗೆ ಬ್ಯಾಂಕ್‌ ಆರಂಭಿಸಲು ಅನುಮತಿಸುವಂತೆ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ನೀಡಿರುವ ಸಲಹೆಯನ್ನು ಸ್ವಾಗತಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp