ಮಧ್ಯಪ್ರದೇಶ: ಕಾಂಗ್ರೆಸ್ ಅಧಿಕಾರಕ್ಕೇರಿದ ಬೆನ್ನಲ್ಲೇ ಸಚಿವಾಲಯದಲ್ಲಿ 'ವಂದೇ ಮಾತರಂ' ಗೆ ಬ್ರೇಕ್!

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರುತ್ತಿದ್ದಂತೆಯೇ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದು, ಜನಸಾಮಾನ್ಯರ, ವಿಪಕ್ಷ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದೆ.

Published: 02nd January 2019 12:00 PM  |   Last Updated: 02nd January 2019 11:49 AM   |  A+A-


MP Chief Minister Kamal Nath

ಮಧ್ಯಪ್ರದೇಶ ಸಿಎಂ ಕಮಲ್ ನಾಥ್

Posted By : SBV SBV
Source : Online Desk
ಭೋಪಾಲ್: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರುತ್ತಿದ್ದಂತೆಯೇ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದು, ಜನಸಾಮಾನ್ಯರ, ವಿಪಕ್ಷ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದೆ. 

ಪ್ರತಿ ತಿಂಗಳ ಮೊದಲ ಕಾರ್ಯನಿರ್ವಹಣೆ ದಿನದಂದು ಸಚಿವಾಲಯಗಳಲ್ಲಿ ವಂದೇ ಮಾತರಂ ಹಾಡಲಾಗುತ್ತಿತ್ತು. ಇದು ಬಿಜೆಪಿ ಸರ್ಕಾರದ ಅವಧಿಯಿಂದಲೂ ನಡೆದುಕೊಂಡು ಬಂದ ಸಂಪ್ರದಾಯವಾಗಿತ್ತು. ಆದರೆ ಸಚಿವಾಲಯದಲ್ಲಿ ರಾಷ್ಟ್ರೀಯ ಗೀತೆಯಾಗಿರುವ ವಂದೇ ಮಾತರಂ ಹಾಡುವುದಕ್ಕೆ ಈಗಿನ ಕಾಂಗ್ರೆಸ್ ಸರ್ಕಾರ ಬ್ರೇಕ್ ಹಾಕಿದ್ದು ಸ್ವತಃ ಮುಖ್ಯಮಂತ್ರಿ ಕಮಲ್ ನಾಥ್ ಈ ಆದೇಶ ಹೊರಡಿಸಿದ್ದಾರೆ. 

ಕಾಂಗ್ರೆಸ್ ಸರ್ಕಾರದ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ವಂದೇ ಮಾತರಂ ಕೇವಲ ರಾಷ್ಟ್ರೀಯ ಗೀತೆಯಲ್ಲ, ಅದು ದೇಶಭಕ್ತಿಯ ಸಮಾನಾರ್ಥ, ಕೂಡಲೇ ಕಾಂಗ್ರೆಸ್ ವಂದೇ ಮಾತರಂ ಹಾಡುವುದನ್ನು ಮತ್ತೆ ಪ್ರಾರಂಭಿಸಬೇಕು ಎಂದು ಆಗ್ರಹಿಸಿದ್ದಾರೆ. 

ಇದೇ ವೇಳೆ ಕಾಂಗ್ರೆಸ್ ನಡೆಯನ್ನು ವಿರೋಧಿಸಿ ಸಚಿವಾಲಯದಲ್ಲಿ ತಾವು ಜ.06 ರಂದು ವಂದೇ ಮಾತರಂ ಹಾಡುವುದಾಗಿ ತಿಳಿಸಿದ್ದಾರೆ. 
Stay up to date on all the latest ರಾಷ್ಟ್ರೀಯ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp