ರಾಫೆಲ್ ಒಪ್ಪಂದ- ಪ್ರಧಾನಿ ಮೋದಿ ಅವರನ್ನು ಮನೋಹರ್ ಪರಿಕ್ಕರ್ ಬೆದರಿಸುತ್ತಿದ್ದಾರೆ: ರಾಹುಲ್ ಗಾಂಧಿ

ರಾಫೆಲ್ ಒಪ್ಪಂದದಲ್ಲಿ ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ರಾಫೆಲ್ ಒಪ್ಪಂದ- ಪ್ರಧಾನಿ ಮೋದಿ ಅವರನ್ನು ಮನೋಹರ್ ಪರಿಕ್ಕರ್ ಬೆದರಿಸುತ್ತಿದ್ದಾರೆ: ರಾಹುಲ್ ಗಾಂಧಿ
ರಾಫೆಲ್ ಒಪ್ಪಂದ- ಪ್ರಧಾನಿ ಮೋದಿ ಅವರನ್ನು ಮನೋಹರ್ ಪರಿಕ್ಕರ್ ಬೆದರಿಸುತ್ತಿದ್ದಾರೆ: ರಾಹುಲ್ ಗಾಂಧಿ
ನವದೆಹಲಿ: ರಾಫೆಲ್ ಒಪ್ಪಂದದಲ್ಲಿ ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಪ್ರಧಾನಿ  ನರೇಂದ್ರ ಮೋದಿ ಅವರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಮನೋಹರ್ ಪರಿಕ್ಕರ್ ಅವರ ಬೆಡ್ ರೂಮ್ ನಲ್ಲಿ ರಾಫೆಲ್ ಒಪ್ಪಂದಕ್ಕೆ ಸಂಬಂಧಿಸಿದ ಕಡತಗಳಿವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ತಮ್ಮ ಆರೋಪವನ್ನು ಸಮರ್ಥಿಸಿಕೊಳ್ಳಲು ಗೋವಾ ಸಚಿವರ ಹೇಳಿಕೆಯನ್ನು ಉಲ್ಲೇಖಿಸಿರುವ ರಾಹುಲ್ ಗಾಂಧಿ, "ನನ್ನ ಬಳಿ ರಾಫೆಲ್ ಒಪ್ಪಂದಕ್ಕೆ ಸಂಬಂಧಿಸಿದ ಎಲ್ಲಾ ಕಡತಗಳಿವೆ, ಆದ್ದರಿಂದ ನನ್ನನ್ನು ಯಾರೂ ಅಲುಗಾಡಿಸಲು ಸಾಧ್ಯವಿಲ್ಲ" ಎಂದು ಪರಿಕ್ಕರ್ ಸಚಿವ ಸಂಪುಟ ಸಭೆಯಲ್ಲಿ ಹೇಳಿದ್ದನ್ನು ಗೋವಾ ಸಚಿವರು ಹೇಳಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 
ಗೋವಾ ಸಚಿವರ ಈ ಹೇಳಿಕೆಯ ಮಾದರಿಯಲ್ಲೇ ಹಲವು ಆಡಿಯೋ ಟೇಪ್ ಗಳು  ಇರಬಹುದು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com