ಚುನಾವಣೆಯಲ್ಲಿ ಬಿಜೆಪಿ ಕಳಪೆ ಪ್ರದರ್ಶನ, ನೋಟಾ ವಿರುದ್ಧ ಎಬಿವಿಪಿಯಿಂದ ಪ್ರಚಾರಂದೋಲನ

ಮೂರು ರಾಜ್ಯಗಳಲ್ಲಿ ಬಿಜೆಪಿ ಕಳಪೆ ಪ್ರದರ್ಶನ ನಂತರ ಲೋಕಸಭಾ ಚುನಾವಣೆಗೂ ಮುಂಚಿತವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಬೆಂಬಲಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿಯಿಂದ ದೇಶಾದ್ಯಂತ ನೋಟಾ ವಿರುದ್ಧ ಆಂದೋಲನಾ ನಡೆಸಲು ನಿರ್ಧರಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಇತ್ತೀಚಿಗೆ ನಡೆದ ಮೂರು ರಾಜ್ಯಗಳಲ್ಲಿ ಬಿಜೆಪಿ ಕಳಪೆ ಪ್ರದರ್ಶನ ನಂತರ ಲೋಕಸಭಾ ಚುನಾವಣೆಗೂ ಮುಂಚಿತವಾಗಿ  ರಾಷ್ಟ್ರೀಯ  ಸ್ವಯಂ ಸೇವಕ ಸಂಘ ಬೆಂಬಲಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿಯಿಂದ  ದೇಶಾದ್ಯಂತ ನೋಟಾ ವಿರುದ್ಧ ಆಂದೋಲನಾ ನಡೆಸಲು ನಿರ್ಧರಿಸಲಾಗಿದೆ.

ಚುನಾವಣೆಗೆ ಸ್ಪರ್ಧಿಸಿರುವ ಯಾವುದೇ ಅಭ್ಯರ್ಥಿಗೆ ಮತ ನೀಡಲು ಇಷ್ಟವಿಲ್ಲದಿದ್ದರೆ ನೋಟಾಗೆ ಮತ ಚಲಾಯಿಸಲು ಅವಕಾಶ ಇದೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನೋಟಾಗೆ ಮತ ಚಲಾಯಿಸುವ ಬದಲು ಯಾರಾದರೂ ಒಬ್ಬ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಜನರಲ್ಲಿ ಮನವಿ ಮಾಡಿಕೊಳ್ಳಲಾಗುವುದು ಎಂದು ಎಬಿವಿಪಿ ರಾಷ್ಟ್ರೀಯ ಕಾರ್ಯದರ್ಶಿ ಹೇಮ ಠಾಕೂರ್ ತಿಳಿಸಿದ್ದಾರೆ.

ಮೂರು ರಾಜ್ಯಗಳಲ್ಲಿ ಬಿಜೆಪಿ ಪ್ರದರ್ಶನ ಹಿನ್ನೆಲೆಯಲ್ಲಿ ಈ ರೀತಿಯ ನಿರ್ಣಯ ಕೈಗೊಳ್ಳಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಹೇಮ ಠಾಕೂರ್,  ಎಬಿವಿಪಿಯ ' ರಾಷ್ಟ್ರ ಮೊದಲು, ಕಡ್ಡಾಯ ಮತದಾನ 'ಘೋಷಣೆಯನ್ನು  ಪ್ರೋತ್ಸಾಹಿಸುವ ನಿಟ್ಟಿನಲ್ಲಿ  ಜನರು  ತಮ್ಮ ಹಕ್ಕು ಚಲಾಯಿಸುವಂತೆ ಅರಿವು ಮೂಡಿಸಲಾಗುತ್ತದೆ ಎಂದು  ಹೇಳಿದರು.

ಇತ್ತೀಚಿಗೆ ನಡೆದ ರಾಜಸ್ತಾನ, ಮಧ್ಯಪ್ರದೇಶ ಚುನಾವಣೆಯಲ್ಲಿ ನೋಟಾದಿಂದ ಬಿಜೆಪಿ ಗೆಲುವಿನ ಅಂತರ ಕಡಿಮೆಯಾಯಿತು ಎಂಬ ಮಾತುಗಳು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಈ ರೀತಿ ನೋಟಾ ವಿರುದ್ಧ ದೇಶಾದ್ಯಂತ ಆಂದೋಲನ ರೂಪಿಸುತ್ತದೆ ಎನ್ನಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com