ರಫೇಲ್ ಒಪ್ಪಂದ ಕುರಿತು ಯಾವುದೇ ವಿವಾದವಿಲ್ಲ, ಇರುವುದು ಕಾಂಗ್ರೆಸ್ಸಿಗರ ಮನಸ್ಸಿನಲ್ಲಿ: ಸುಷ್ಮಾ ಸ್ವರಾಜ್

ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತು ಯಾವುದೇ ವಿವಾದವಿಲ್ಲ, ವಿವಾದ ಇರುವುದು ಕಾಂಗ್ರೆಸ್ಸಿಗರ ಮನಸ್ಸಿನಲ್ಲಿ ಮಾತ್ರ ಎಂತು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಗುರುವಾರ ಹೇಳಿದ್ದಾರೆ...
ಸುಷ್ಮಾ ಸ್ವರಾಜ್
ಸುಷ್ಮಾ ಸ್ವರಾಜ್
ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತು ಯಾವುದೇ ವಿವಾದವಿಲ್ಲ, ವಿವಾದ ಇರುವುದು ಕಾಂಗ್ರೆಸ್ಸಿಗರ ಮನಸ್ಸಿನಲ್ಲಿ ಮಾತ್ರ ಎಂತು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಗುರುವಾರ ಹೇಳಿದ್ದಾರೆ. 
ಸಂಸತ್ತಿನ ಪ್ರಶ್ನೋತ್ತರ ಅವಧಿ ಮಾತನಾಡಿದ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಫ್ರೆಂಚ್ ಅಧ್ಯಕ್ಷರ ನಡುವೆ 2015ರ ಏಪ್ರಿಲ್ 10 ರಂದು ನಡೆದ ಮಾತುಕತೆಯನ್ನು ಪ್ರಸ್ತಾಪಿಸಿದರು. 
ಈ ವೇಳೆ ಪ್ರತಿಕ್ರಿಯೆ ನೀಡಿದ ಸುಷ್ಮಾ ಸ್ವರಾಜ್ ಅವರು, ರಫೇಲ್ ಯುದ್ಧ ವಿಮಾನ ಖರೀದಿ ಕುರಿತು ಯಾವುದೇ ವಿವಾದಗಳಿಲ್ಲ. ವಿವಾದ ಇರುವುದು ಕಾಂಗ್ರೆಸ್ಸಿಗರ ಮನಸ್ಸಿನಲ್ಲಿ ಎಂದು ಹೇಳಿದ್ದಾರೆ. 
ದೇಶದ ಸರ್ವೋಚ್ಛ ನ್ಯಾಯಾಲಯವೇ ರಫೇಲ್ ಒಪ್ಪಂದ ಕುರಿತು ಕ್ಲೀನ್ ಚಿಟ್ ನೀಡಿದೆ. ಹೀಗಿರುವಾಗ ಕಾಂಗ್ರೆಸ್ ತನ್ನ ಆರೋಪವನ್ನು ಮುಂದುವರೆಸಿದರೆ, ವಾಸ್ತವದಲ್ಲಿ ಇಲ್ಲದೇ ಇರುವ ಹಗರಣವನ್ನು ಕಾಂಗ್ರೆಸ್ ಮನಸ್ಸಿನಲ್ಲಿ ಇಟ್ಟುಕೊಂಡಿದೆ. ಕಾಂಗ್ರೆಸ್ ನಾಯಕರು ರಫೇಲ್ ವಿವಾದವನ್ನು ಇಟ್ಟುಕೊಂಡು ಪ್ರತೀನಿತ್ಯ ಬೊಬ್ಬೆ ಹೊಡೆಯುತ್ತಿದ್ದಾರೆ. ಯಾರಿಗೂ ಏನೂ ಮಾಡಲು ಸಾಧ್ಯವಿಲ್ಲ. ಪ್ರತಿನಿತ್ಯ ಅವರ ಪ್ರಶ್ನಗೆ ಉತ್ತರಿಸುತ್ತಾ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. 
ಅತ್ಯುನ್ನತ ಮಟ್ಟದ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಯಾವುದೇ ವಿವಾದಗಳಿಲ್ಲ ಎಂದು ಇಡೀ ದೇಶಕ್ಕೆ ತಿಳಿದಿದೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com