ರಾಮ ಮಂದಿರ ಬಗ್ಗೆ ಸುಪ್ರೀಂ ತೀರ್ಪು ಅಂತಿಮ, ಸುಗ್ರೀವಾಜ್ಞೆಯ ಅಗತ್ಯ ಇಲ್ಲ: ಕೇಂದ್ರ ಸಚಿವ

ರಾಮ ಮಂದಿರ ನಿರ್ಮಾಣ ಸಂಬಂಧ ಸುಗ್ರೀವಾಜ್ಞೆ ಹೊರಡಿಸಬೇಕು ಎಂಬ ಬೇಡಿಕೆಗೆ ತೀವ್ರ ವಿರೋಧ...
ರಾಮ್ ವಿಲಾಸ್ ಪಾಸ್ವಾನ್
ರಾಮ್ ವಿಲಾಸ್ ಪಾಸ್ವಾನ್
ನವದೆಹಲಿ: ರಾಮ ಮಂದಿರ ನಿರ್ಮಾಣ ಸಂಬಂಧ ಸುಗ್ರೀವಾಜ್ಞೆ ಹೊರಡಿಸಬೇಕು ಎಂಬ ಬೇಡಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹಾಗೂ ಬಿಜೆಪಿ ಮಿತ್ರ ಪಕ್ಷ ಎಲ್ ಜೆಪಿ ಅಧ್ಯಕ್ಷ ರಾಮ್ ವಿಲಾಸ್ ಪಾಸ್ವಾನ್ ಅವರು, ಈ ಸಂಬಂಧ ಸುಪ್ರೀಂ ಕೋರ್ಟ್ ನೀಡುವ ತೀರ್ಪೇ ಅಂತಿಮ ಎಂದು ಗುರುವಾರ ಹೇಳಿದ್ದಾರೆ.
ರಾಮ ಮಂದಿರ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಏನೇ ತೀರ್ಪು ನೀಡಿದರೂ ಅದನ್ನು ಎಲ್ಲರೂ ಒಪ್ಪಿಕೊಳ್ಳಬೇಕು. ಹಿಂದೂ, ಮುಸ್ಲಿಮ್ ಅಥವಾ ಇತರೆ ಸಮುದಾಯದವರೂ ಸಹ ಕೋರ್ಟ್ ತೀರ್ಪನ್ನು ಗೌರವಿಸಬೇಕು ಎಂದಿದ್ದಾರೆ.
ಇದೇ ವೇಳೆ ನೀವು ಸುಗ್ರೀವಾಜ್ಞೆ ಬೆಂಬಲಿಸುತ್ತೀರಾ? ಎಂಬ ವರದಿಗಾರರ ಪ್ರಶ್ನಿಗೆ ಉತ್ತರಿಸಿದ ಪಾಸ್ವಾನ್, ಇಲ್ಲ. ನಾನು ಬೆಂಬಲಿಸುವುದಿಲ್ಲ ಮತ್ತು ನಮ್ಮ ನಿರ್ಧಾರ ಸ್ಪಷ್ಟವಾಗಿದೆ. ಸುಪ್ರೀಂ ತೀರ್ಪೇ ಅಂತಿಮ. ಸುಗ್ರೀವಾಜ್ಞೆಯ ಅಗತ್ಯ ಇಲ್ಲ ಎಂದು ಹೇಳಿದ್ದಾರೆ.
ವಿಶ್ವ ಹಿಂದು ಪರಿಷತ್ ಸೇರಿದಂತೆ ಹಲವು ಹಿಂದುಪರ ಸಂಘಟನೆಗಳು ರಾಮ ಮಂದಿರ ನಿರ್ಮಾಣ ಸಂಬಂಧ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಒತ್ತಾಯಿಸುತ್ತಿವೆ. ಕಳೆದ ಮಂಗಳವಾರ ಈ ಬಗ್ಗೆ ಪ್ರತಿಕ್ರಿಯಿಸಿದ್ದ ಪ್ರಧಾನಿ ಮೋದಿ, ನ್ಯಾಯಾಂಗ ಪ್ರಕ್ರಿಯೆ ಮುಗಿಯುವವರೆಗೆ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಸುಪ್ರೀಂ ಕೋರ್ಟ್ ತೀರ್ಪಿಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com