2019ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಫೆಲ್ ಡೀಲ್ ತನಿಖೆ: ರಾಹುಲ್ ಗಾಂಧಿ

2019ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಫೆಲ್ ಡೀಲ್ ಕುರಿತು ತನಿಖೆ ನಡೆಸಿ, ಆರೋಪಿಗಳಿಗೆ....
ರಾಹುಲ್ ಗಾಂಧಿ
ರಾಹುಲ್ ಗಾಂಧಿ
ನವದೆಹಲಿ: 2019ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಫೆಲ್ ಡೀಲ್ ಕುರಿತು ತನಿಖೆ ನಡೆಸಿ, ಆರೋಪಿಗಳಿಗೆ ಶಿಕ್ಷೆ ನೀಡಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಸಂಸತ್ ಭವನದ ಹೊರಗಡೆ ಸುದ್ದಿಗಾರರೊಂದಿಗೆ ಮಾತವನಾಡಿದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಪರವಾಗಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಾತನಾಡುತ್ತಿದ್ದಾರೆ. ರಾಫೆಲ್ ಹಗರಣಕ್ಕೆ ಸಂಬಂಧಿಸಿದಂತೆ ನಮ್ಮ ಪ್ರಶ್ನೆಗಳಿಗೆ ರಕ್ಷಣಾ ಸಚಿವೆ ಉತ್ತರಿಸಬೇಕು ಎಂದು ಒತ್ತಾಯಿಸಿದರು.
ರಾಫೆಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಮಾತುಕತೆ ತಂಡ ಮತ್ತು ರಕ್ಷಣಾ ಸಚಿವಾಲಯ ಯಾವುದಾದರೂ ಆಕ್ಷೇಪಣೆ ಸಲ್ಲಿಸಿದೆಯೇ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಚರ್ಚೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ ರಾಹುಲ್, ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು, ನನ್ನನ್ನು ನಿಂದಿಸುವ ಬದಲು ರಾಫೆಲ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸಲಿ ಎಂದರು.
2019ರ ಲೋಕಸಭಾ ಚುನಾವಣೆಯಲ್ಲಿ  ರಾಮಮಂದಿರಕ್ಕಿಂತಲೂ ಉದ್ಯೋಗ, ಕೃಷಿಕರ ಸಮಸ್ಯೆಗಳು, ಆರ್ಥಿಕ ನೀತಿಗಳು, ಆರೋಗ್ಯ ಮತ್ತು ಶಿಕ್ಷಣ , ರಾಫೆಲ್ ಒಪ್ಪಂದ ಮತ್ತಿತರ ಸಮಸ್ಯೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ರಾಹುಲ್ ಗಾಂಧಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com