ಲೋಕಸಭೆ ಚುನಾವಣೆ 2019: ನಟ ಪ್ರಕಾಶ್ ರಾಜ್ ಸ್ಪರ್ಧೆಗೆ ಆಪ್ ಬೆಂಬಲ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಟ ಪ್ರಕಾಶ್ ರಾಜ್ ಅವರು ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷ ಪ್ರಕಾಶ್ ರಾಜ್ ಅವರಿಗೆ ಶನಿವಾರ ಬೆಂಬಲ ವ್ಯಕ್ತಪಡಿಸಿದೆ...

Published: 05th January 2019 12:00 PM  |   Last Updated: 05th January 2019 04:34 AM   |  A+A-


Actor Prakash Raj

ನಟ ಪ್ರಕಾಶ್ ರಾಜ್

Posted By : MVN MVN
Source : The New Indian Express
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಟ ಪ್ರಕಾಶ್ ರಾಜ್ ಅವರು ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷ ಪ್ರಕಾಶ್ ರಾಜ್ ಅವರಿಗೆ ಶನಿವಾರ ಬೆಂಬಲ ವ್ಯಕ್ತಪಡಿಸಿದೆ. 

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಟೀಕೆ ಮಾಡುತ್ತಿದ್ದ ಪ್ರಕಾಶ್ ರಾಜ್ ಅವರು ಮಂಗಳವಾರವಷ್ಟೇ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿತ್ತು. 

ಈ ಹಿನ್ನಲೆಯಲ್ಲಿ ಇಂದು ನಗರದಲ್ಲಿ ಪ್ರಕಾಶ್ ರಾಜ್ ಅವರನ್ನು ಭೇಟಿಯಾಗಿ ಮಾತಕತೆ ನಡೆಸಿರುವ ಆಪ್ ನಾಯಕ ಮನೀಷ್ ಸಿಸೋಡಿಯಾ ಅವರು, ನಟನಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. 

ಪ್ರಕಾಶ್ ರಾಜ್ ಅವರ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಉತ್ತಮ ವ್ಯಕ್ತಿಗಳನ್ನು ರಾಜಕೀಯಕ್ಕೆ ಸ್ವಾಗತಿಸುತ್ತೇವೆಂದಿದ್ದಾರೆ. ಇದರಂತೆ ಪಕ್ಷದ ಅಧಿಕೃತ ಟ್ವಿಟರ್ ಖಾತೆಯಲ್ಲಿಯೂ ನಟ ಪ್ರಕಾಶ್ ರಾಜ್ ಅವರಿಗೆ ಬೆಂಬಲ ನೀಡುವುದಾಗಿ ಆಮ್ ಆದ್ಮಿ ಪಕ್ಷ ತಿಳಿಸಿದೆ.

ಆಮ್ ಆದ್ಮಿ ಬೆಂಬಲ ನೀಡಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಕಾಶ್ ರಾಜ್ ಅವರು ಧನ್ಯವಾದಗಳನ್ನು ಹೇಳಿದ್ದಾರೆ. 
Stay up to date on all the latest ರಾಷ್ಟ್ರೀಯ news
Poll
Online education learning

ಆನ್‌ಲೈನ್ ಕಲಿಕೆಯ ಪ್ರಯೋಗವು ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುತ್ತದೆ ಎಂದು ಹಾರ್ವರ್ಡ್ ಪ್ರಾಧ್ಯಾಪಕರೊಬ್ಬರು ಹೇಳಿದ್ದಾರೆ. ನೀವು ಏನಂತೀರಿ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp