ಪೌರತ್ವ ಮಸೂದೆ ವಿರೋಧಿಸಿ ಪ್ರತಿಭಟನೆ, ಶಿಲ್ಲಾಂಗ್ ಬಿಜೆಪಿ ಕಚೇರಿ ಮೇಲೆ ಬಾಂಬ್ ದಾಳಿ

ದುಷ್ಕರ್ಮಿಗಳು ಶಿಲ್ಲಾಂಗ್ ಬಿಜೆಪಿ ಕಚೇರಿ ಮೇಲೆ ಬಾಂಬ್ ಎಸೆದಿದ್ದು, ಸ್ಫೋಟದಲ್ಲಿ ಯಾವುದೇ ಜೀವ ಹಾನಿಯಾಗಿಲ್ಲ...

Published: 07th January 2019 12:00 PM  |   Last Updated: 07th January 2019 11:59 AM   |  A+A-


Bomb attack on Shillong BJP office, protest against Citizenship Bill continues

ಸಾಂದರ್ಭಿಕ ಚಿತ್ರ

Posted By : LSB LSB
Source : PTI
ಶಿಲ್ಲಾಂಗ್: ದುಷ್ಕರ್ಮಿಗಳು ಶಿಲ್ಲಾಂಗ್ ಬಿಜೆಪಿ ಕಚೇರಿ ಮೇಲೆ ಬಾಂಬ್ ಎಸೆದಿದ್ದು, ಸ್ಫೋಟದಲ್ಲಿ ಯಾವುದೇ ಜೀವ ಹಾನಿಯಾಗಿಲ್ಲ. ಆದರೆ ಕಚೇರಿ ಕಟ್ಟಡ ಭಾಗಶಃ ಹಾನಿಯಾಗಿದೆ ಎಂದು ಸೋಮವಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಪೌರತ್ವ ಮಸೂದೆ ವಿರೋಧಿಸಿ ಈಶಾನ್ಯ ರಾಜ್ಯಗಳ ವಿದ್ಯಾರ್ಥಿ ಸಂಘ ನಾಳೆ ಈಶಾನ್ಯ ಬಂದ್ ಗೆ ಕರೆ ನೀಡಿದ್ದು, ಬಂದ್ ಗೂ ಮುನ್ನವೇ ಬಾಂಬ್ ದಾಳಿ ನಡೆಸುವ ಮೂಲಕ ಬಿಜೆಪಿಗೆ ಬಿಸಿ ಮುಟ್ಟಿಸಿದ್ದಾರೆ.

ಬಿಜೆಪಿ ಕಚೇರಿ ಮೇಲೆ ನಡೆದ ಬಾಂಬ್ ದಾಳಿ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೂರ್ವ ಕಾಶಿ ಹಿಲ್ಸ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ದೇವಿಸ್ ಎನ್ಆರ್ ಮರಕ್ ಅವರು ಹೇಳಿದ್ದಾರೆ.

ಕಳೆದ ರಾತ್ರಿ ಅಪರಿಚಿತ ವ್ಯಕ್ತಿಗಳು ಬಿಜೆಪಿ ಕಚೇರಿಯ ಮುಂಭಾಗದಲ್ಲಿ ಬಾಂಬ್ ದಾಳಿ ನಡೆಸಿದ್ದು, ಕಚೇರಿ ಭಾಗಶಃ ಹಾನಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಶಿಂಬುನ್ ಲಿಂಗ್ಡೊ ಅವರು ತಿಳಿಸಿದ್ದಾರೆ.
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp