ಭಾರತ್ ಬಂದ್: ದೇಶದಾದ್ಯಂತ ಮಿಶ್ರ ಪ್ರತಿಕ್ರಿಯೆ, ಯಥಾಸ್ಥಿತಿಯತ್ತ ಹಲವು ರಾಜ್ಯಗಳು

ಕೇಂದ್ರ ಸರ್ಕಾರದ ಹಲವು ನೀತಿಗಳನ್ನು ಖಂಡಿಸಿ ಕಾರ್ಮಿಕ ಸಂಘಟನೆಗಳ ಒಕ್ಕೂಟ ನೀಡಿದ್ದ ಎರಡು ದಿನಗಳ ಭಾರತ್ ಬಂದ್ ಕರೆಗೆ ದೇಶದಾದ್ಯಂತ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗತೊಡಗಿವೆ...

Published: 08th January 2019 12:00 PM  |   Last Updated: 08th January 2019 12:21 PM   |  A+A-


CITU AITUC workers stage protest during Bharat Bandh in Mysore

ಸಿಐಟಿಯು ಎಐಟಿಯುಸಿ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟನೆ ನಡೆಸುತ್ತಿರುವುದು

Posted By : MVN MVN
Source : Online Desk
ನವದೆಹಲಿ: ಕೇಂದ್ರ ಸರ್ಕಾರದ ಹಲವು ನೀತಿಗಳನ್ನು ಖಂಡಿಸಿ ಕಾರ್ಮಿಕ ಸಂಘಟನೆಗಳ ಒಕ್ಕೂಟ ನೀಡಿದ್ದ ಎರಡು ದಿನಗಳ ಭಾರತ್ ಬಂದ್ ಕರೆಗೆ ದೇಶದಾದ್ಯಂತ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗತೊಡಗಿವೆ. 

ಬೆಂಗಳೂರು ನಗರದಲ್ಲಿ ಕೆಎಸ್ಆರ್'ಟಿಸಿ ಬಸ್ ಸಂಚಾರ ಸ್ಥಗಿತಗೊಂಡಿದ್ದರೆ, ಕಡಿಮೆ ಸಂಖ್ಯೆಯಲ್ಲಿ ಬಿಎಂಟಿಸಿ ಬಸ್ ಸಂಚಾರ ನಡೆಸುತ್ತಿವೆ. ಕೆಲವೆಡೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದಿರುವುದಾಗಿ ವರದಿಗಳಾಗಿವೆ. 

ಪೀಣ್ಯದಿಂದ ಮೆಜೆಸ್ಟಿಕ್'ಗೆ ಬರುತ್ತಿದ್ದ ಬಸ್'ಗೆ ಬೈಕ್ ನಲ್ಲಿ ಬಂದ ಇಬ್ಬರು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟ ಹಿನ್ನೆಲೆಯಲ್ಲಿ ಡಿಪೋ ನಂಬರ್ 98ಕ್ಕೆ ಸೇರಿದ ಬಸ್ ಪ್ರಯಾಣಿಕರನ್ನು ಅರ್ಧ ದಾರಿಯಲ್ಲಿ ಇಳಿಸುವಂತಾಗಿದೆ. 

ಇನ್ನು ಕೊಡಗು, ಚಿಕ್ಕಮಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದರೆ, ಬೆಳಗಾವಿ, ರಾಮನಗರ, ಹಾವೇರಿಯಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. 

ಬಂದ್'ಗೆ ವಾಣಿಜ್ಯ ನಗರಿ ಮುಂಬೈನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಸ್ ಗಳಿಲ್ಲದೆ ಜನರು ಪರದಾಡುವಂತರ ಪರಿಸ್ಥಿತಿ ಎದುರಾಗಿದೆ. 

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹಾಗೂ ಸಿಪಿಎಂ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿರುವುದಾಗಿ ವರದಿಗಳು ತಿಳಿಸಿವೆ. ಇದಲ್ಲದೆ, ಬರಸತ್'ನ ಚಂಪದಲಿ ಪ್ರದೇಶದಲ್ಲಿ ಶಾಲಾ ಬಸ್ ಮೇಲೆ ಕಲ್ಲು ತೂರಾಟಗಳು ನಡೆದಿರುವುದಾಗಿ ತಿಳಿದುಬಂದಿದೆ.

ಕೇರಳ ರಾಜ್ಯದಲ್ಲಿ ಬಂದ್ ಕರೆಗೆ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಪ್ರತಿಭಟನಾನಿರತರು ತಿರುವನಂತಪುರಂ ಮತ್ತು ಅಲಪ್ಪುಝಾ ರೈಲ್ವೇ ನಿಲ್ದಾಣವನ್ನು ತಡೆ ಹಿಡಿದಿದ್ದು, ಇದರ ಪರಿಣಾಮ ಹಲವು ರೈಲು ಸೇವೆಗಳ ಮೇಲೆ ಪರಿಣಾಮ ಬೀರಿದೆ. ಪ್ರತಿಭಟನೆ ಪರಿಣಾಮ ರೈಲು ಸಂಚಾರ ವಿಳಂಬಗೊಂಡಿದೆ. 
Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
facebook twitter whatsapp