1984ರ ಸಿಖ್ ನರಮೇಧದ ಅಪರಾಧಿಗಳು ಯಾರೇ ಆದರೂ ಕಠಿಣ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

ಸಾವಿರಾರು ಸಿಖ್ಖರ ಮಾರಣಹೋಮಕ್ಕೆ ಕಾರಣವಾಗಿದ್ದ 1984ರ ಸಿಖ್ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರತಿಕ್ರಿಯೆ ನೀಡಿದ್ದು, ನರಮೇಧದಲ್ಲಿ ಪಾಲ್ದೊಂಡವರು ಯಾರೇ ಆದರೂ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಅಬುದಾಬಿ: ಸಾವಿರಾರು ಸಿಖ್ಖರ ಮಾರಣಹೋಮಕ್ಕೆ ಕಾರಣವಾಗಿದ್ದ 1984ರ ಸಿಖ್ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರತಿಕ್ರಿಯೆ ನೀಡಿದ್ದು, ನರಮೇಧದಲ್ಲಿ ಪಾಲ್ದೊಂಡವರು ಯಾರೇ ಆದರೂ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.
ಯುಎಇ ಪ್ರವಾದಲ್ಲಿರುವ ರಾಹುಲ್ ಗಾಂಧಿ ಅಲ್ಲಿನ ಗಲ್ಫ್ ನ್ಯೂಸ್ ಸುದ್ದಿವಾಹಿನಿಗೆ ಸಂದರ್ಶನ ನೀಡಿದ್ದು, ಸಂದರ್ಶನದಲ್ಲಿ ಹಲವು ವಿಚಾರಗಳ ಕುರಿತು ಮಾತನಾಡಿದ್ದಾರೆ. ಪ್ರಮುಖವಾಗಿ ಇಂದಿರಾ ಗಾಂಧಿ ಹತ್ಯೆ ಬಳಿಕ ದೇಶದಲ್ಲಿ ಉಂಟಾಗಿದ್ದ ಸಿಖ್ಖರ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದಾರೆ.
'ನಾನು ಈ ಮೂಲಕ ಸ್ಪಷ್ಟಪಡಿಸುವುದೇನು ಎಂದರೆ. 1984ರ ಸಿಖ್ ಹತ್ಯಾಕಾಂಡದಲ್ಲಿ ಪಾಲ್ಗೊಂಡವರು ಯಾರೇ ಆಗಿರಲಿ, ಯಾವ ಪಕ್ಷಕ್ಕೇ ಸೇರಿರಲಿ ಅವರಿಗೆ ಕಠಿಣ ಶಿಕ್ಷೆಯಾಗಬೇಕು. ಅಲ್ಪ ಸಂಖ್ಯಾತರನ್ನು ತುಳಿದು ಮೇಲೆ ಬರಬಲ್ಲೆವು ಎಂಬ ಆಲೋಚನೆ ಹೊಂದಿರುವವರನ್ನು ಕ್ಷಮಿಸಲು ಅಸಾಧ್ಯ. ಒಂದು ವೇಳೆ ಯಾರಾದರೂ ಅಲ್ಪ ಸಂಖ್ಯಾತರಿದೆ ತೊಂದರೆ ನೀಡಿದ್ದರೆ ಅವರಿಗೆ ಖಂಡಿತಾ ಶಿಕ್ಷೆಯಾಗಬೇಕು. ಭಾರತದ ನ್ಯಾಯಾಂಗ ವ್ಯವಸ್ಥೆ ಬಲಿಷ್ಠವಾಗಿದ್ದು ಇಂತಹ ಸೂಕ್ಷ್ಮ ಪ್ರಕರಣಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ ಮತ್ತು ಸಿಖ್ ಸಮುದಾಯದ ಸಂತ್ರಸ್ಥರಿಗೆ ನ್ಯಾಯ ಒದಗಿಸುತ್ತದೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಅವರನ್ನು ಮಣಿಸುವುದು ನಮ್ಮ ಮೊದಲ ಗುರಿ
ಇದೇ ವೇಳೆ 2019ರ ಲೋಕಸಭಾ ಚುನಾವಣೆ ಕುರಿತು ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಅವರನ್ನು ಮಣಿಸುವುದು ನಮ್ಮ ಮೊದಲ ಗುರಿಯಾಗಿದೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಅಚ್ಚರಿ ಫಲಿತಾಂಶ ನೀಡುತ್ತದೆ. ಬಿಜೆಪಿ ಪಕ್ಷಕ್ಕೆ ಪ್ರಬಲ ಪೈಪೋಟಿ ನೀಡಿ ಗೆಲುವು ಸಾಧಿಸಬಲ್ಲ ಹಲವು ರಾಜ್ಯಗಳು ಇದ್ದು, ಇಲ್ಲಿ ಕಾಂಗ್ರೆಸ್ ಪ್ರಾಬಲ್ಯ ಹೊಂದಿದೆ. ಮಹಾರಾಷ್ಟ್ರ, ಜಾರ್ಖಂಡ್, ತಮಿಳುನಾಡು, ಬಿಹಾರದಲ್ಲಿ ಮಿತ್ರ ಪಕ್ಷಗಳೊಂದಿಗೆ ಕೈ ಜೋಡಿಸಿ ಸ್ಪರ್ಧೆ ಮಾಡುತ್ತಿದ್ದೇವೆ. ಇನ್ನು ಬಿಜೆಪಿ ಆಡಳಿತ ವಿರುವ ಉತ್ತರ ಪ್ರದೇಶದಲ್ಲಿ ನಮ್ಮ ಯಜನೆಗಳು ಫಲ ನೀಡುತ್ತಿದ್ದು, ಖಂಡಿತಾ ಉತ್ತರ ಪ್ರದೇಶದ ಜನ ಕಾಂಗ್ರೆಸ್ ಗೆ ಗೆಲುವು ನೀಡಲಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com