ಕಾಶ್ಮೀರ: ಎಲ್ಒಸಿ ಬಳಿ ಐಇಡಿ ಸ್ಫೋಟ, ಸೇನಾ ಮೇಜರ್, ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ರಾಜೋರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ಒಸಿ) ಬಳಿ ಶಂಕಿತ ಉಗ್ರರು ಶುಕ್ರವಾರ ಐಇಡಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೋರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ಒಸಿ) ಬಳಿ ಶಂಕಿತ ಉಗ್ರರು ಶುಕ್ರವಾರ ಐಇಡಿ ಸ್ಫೋಟಿಸಿದ್ದು, ಘಟನೆಯಲ್ಲಿ ಓರ್ವ ಸೇನಾ ಮೇಜರ್ ಹಾಗೂ ಓರ್ವ ಯೋಧ ಹುತಾತ್ಮರಾಗಿದ್ದಾರೆ.
ರಾಜೋರಿ ಜಿಲ್ಲೆಯ ನೌಷೆರಾ ಸೆಕ್ಟರ್ ನಲ್ಲಿ ಶಂಕಿತ ಉಗ್ರರು ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ಎಲ್ ಒಸಿ ಬಳಿ ಇರುವ ಕಾಲುದಾರಿಯಲ್ಲಿ ಸುಧಾರಿತ ಸ್ಫೋಟಕ ಬಾಂಬ್(ಐಇಡಿ) ಫಿಕ್ಸ್ ಮಾಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಫೋಟದಲ್ಲಿ ಮೇಜರ್ ಸೇರಿದಂತೆ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com