ಸಿಎಂ ಕುಮಾರಸ್ವಾಮಿಯನ್ನು ಕಾಂಗ್ರೆಸ್ 'ಕ್ಲರ್ಕ್' ತರಹ ನಡೆಸಿಕೊಳ್ಳುತ್ತಿದೆ: ಮೈತ್ರಿ ವಿರುದ್ಧ ಮೋದಿ ವ್ಯಂಗ್ಯ

ಮೈತ್ರಿ ಸರ್ಕಾರದಲ್ಲಿ ನನಗೆ ಉಸಿರುಗಟ್ಟಿಸುವಂತ ಪರಿಸ್ಥಿತಿ ಇದೆ. ನಾನು ಮುಖ್ಯಮಂತ್ರಿಯಾಗಿ ಕೆಲಸ ಮಾಡುತ್ತಿಲ್ಲ, ಕೇವಲ ಕ್ಲರ್ಕ್ ರೀತಿ ಕೆಲಸ...
ಎಚ್ ಡಿ ಕುಮಾರಸ್ವಾಮಿ, ನರೇಂದ್ರ ಮೋದಿ
ಎಚ್ ಡಿ ಕುಮಾರಸ್ವಾಮಿ, ನರೇಂದ್ರ ಮೋದಿ
ನವದೆಹಲಿ: ಮೈತ್ರಿ ಸರ್ಕಾರದಲ್ಲಿ ನನಗೆ ಉಸಿರುಗಟ್ಟಿಸುವಂತ ಪರಿಸ್ಥಿತಿ ಇದೆ. ನಾನು ಮುಖ್ಯಮಂತ್ರಿಯಾಗಿ ಕೆಲಸ ಮಾಡುತ್ತಿಲ್ಲ, ಕೇವಲ ಕ್ಲರ್ಕ್ ರೀತಿ ಕೆಲಸ ಮಾಡುತ್ತಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಅವರು ಹೇಳಿದ್ದು ಇದೇ ವಿಚಾರವನ್ನು ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 
ನವದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಬಿಜೆಪಿ ಕೌನ್ಸಿಲ್ ಸಭೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದು ಕರ್ನಾಟಕದ ಮುಖ್ಯಮಂತ್ರಿಗಳು ತಾವು ಕ್ಲರ್ಕ್ ರೀತಿ ಕೆಲಸ ಮಾಡುತ್ತಿದ್ದೇನೆ ಅಂತ ಬಹಿರಂಗವಾಗಿ ಹೇಳಿಕೊಳ್ಳುವಂತ ಪರಿಸ್ಥಿತಿಯನ್ನು ಕಾಂಗ್ರೆಸ್ ನಿರ್ಮಾಣ ಮಾಡಿದೆ. ಇಂತಹ ದುಸ್ಥಿತಿಯನ್ನು ತಂದಿರುವಂತ ಕಾಂಗ್ರೆಸ್ ಗೆ ದೇಶದ ಸರ್ಕಾರಿ ಸಂಸ್ಥೆಗಳ ಮೇಲೆ ನಂಬಿಕೆ ಇಲ್ಲ ಎಂದು ಹೇಳಿದರು.
ಇದೇ ವೇಳೆ ಕಾಂಗ್ರೆಸ್ ಅವಧಿಯಲ್ಲಿ ನೀಡಲಾದ ಸಾಲದ ಮೊತ್ತದ ಅಂಕಿ-ಅಂಶ ನೀಡಿರುವ ಪ್ರಧಾನಿ ಮೋದಿ, ಕಾಂಗ್ರೆಸ್ ಅವಧಿಯಲ್ಲಿ ಎರಡು ಲೋನ್ ಪ್ರಕ್ರಿಯೆಗಳಿದ್ದವು, ಒಂದು ಸಾಮಾನ್ಯ ಪ್ರಕ್ರಿಯೆ ಮತ್ತೊಂದು ಕಾಂಗ್ರೆಸ್ ಪ್ರಕ್ರಿಯೆ. ಸಾಮಾನ್ಯ ಲೋನ್ ಪ್ರಕ್ರಿಯೆಯಡಿಯಲ್ಲಿ ಮನೆ, ಶಿಕ್ಷಣಕ್ಕಾಗಿ ಸಾಲ ಮಾಡಲಾಗುತ್ತಿತ್ತು. 
ಆದರೆ ಕಾಂಗ್ರೆಸ್ ಲೋನ್ ಪ್ರಕ್ರಿಯೆಯಡಿಯಲ್ಲಿ ಕಾಂಗ್ರೆಸ್ ಗೆ ಬೇಕಾದವರಿಗೆ ಒಂದು ಫೋನ್ ಕಾಲ್ ನಲ್ಲಿ ಮುಗಿಯುತ್ತಿತ್ತು. ಸಾಮಾನ್ಯ ಲೋನ್ ಪ್ರಕ್ರಿಯೆಯಡಿಯಲ್ಲಿ ಗ್ಯಾರೆಂಟಿ ಕೇಳಲಾಗುತ್ತಿತ್ತು, ಆದರೆ ಕಾಂಗ್ರೆಸ್ ಪ್ರಕ್ರಿಯೆಯಲ್ಲಿ ಏನೂ ಗ್ಯಾರೆಂಟಿ ಕೇಳಲಾಗುತ್ತಿರಲಿಲ್ಲ. ಕೊಟ್ಟ ಹಣವನ್ನು ಕೊಳ್ಳೆಹೊಡೆಯಬಹುದಾಗಿತ್ತು. ಚೌಕಿದಾರ ಯಾವುದೇ ಚೋರರನ್ನೂ ಬಿಡುವುದಿಲ್ಲ ಎಂದು ಮೋದಿ ಎಚ್ಚರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com