ಬಿಜೆಪಿ ಭಯದಿಂದಾಗಿ ಎಸ್ ಪಿ- ಬಿಎಸ್ ಪಿ ಮೈತ್ರಿ ನಡೆದಿದೆ: ನಿತಿನ್ ಗಡ್ಕರಿ

ಹುಜನ ಸಮಾಜವಾದಿ ಪಕ್ಷ ಮತ್ತು ಸಮಾಜವಾದಿ ಪಕ್ಷದ ನಾಯಕರುಗಳಿಗೆ ಬಿಜೆಪಿ ಎಂದರೇ ಭಯ, ಹೀಗಾಗಿ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ನಿತಿನ್ ...
ನಿತಿನ್ ಗಡ್ಕರಿ
ನಿತಿನ್ ಗಡ್ಕರಿ
ನವದೆಹಲಿ: ಬಹುಜನ ಸಮಾಜವಾದಿ ಪಕ್ಷ ಮತ್ತು ಸಮಾಜವಾದಿ ಪಕ್ಷದ ನಾಯಕರುಗಳಿಗೆ ಬಿಜೆಪಿ ಎಂದರೇ ಭಯ, ಹೀಗಾಗಿ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಟೀಕಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಮಾಯಾವತಿ ಸರ್ಕಾರ ಇದ್ದಾಗ ಮುಲಾಯಂ ಸಿಂಗ್ ಬೆಂಬಲಿಗರು ವಿಧಾನಸೌಧದಲ್ಲಿ ಏನು ಮಾಡಿದ್ದರು ಎಂಬುದನ್ನು ನೆನಪು ಮಾಡಿಕೊಳ್ಳಿ ಎಂದು ಗಡ್ಕರಿ ಹೇಳಿದ್ದಾರೆ.,
ನಾವು ಮಾಡಿದ ಅಭಿವೃದ್ಧಿ ಕೆಲಸಗಳಿಂದ  ತಮ್ಮ ಸೋಲು ಖಚಿತ ಎಂದು ಭಯಗೊಂಡಿರುವ ಎಸ್ ಪಿ ಮತ್ತು ಬಿಎಸ್ ಪಿ ನಮ್ಮ ವಿರುದ್ಧ ಮೈತ್ರಿ ಮಾಡಿಕೊಂಡಿವೆ ಎಂದು ಹೇಳಿದ್ದಾರೆ.
ಅವರು ಒಟ್ಟಾಗಿ ಬಂದು ಏನೇ ಮಾಡಿದರೂ ನಾವು ಪ್ರಬಲರಾಗಿದ್ದೇವೆ, ಮೈದಾನದಿಂದ ನಿಮ್ಮನ್ನು ಹೊರಗೆಸೆಯುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಗಡ್ಕರಿ ತಿಳಿಸಿದ್ದಾರೆ.
ಬಿಜೆಪಿ ವಿರುದ್ಧ ಸೋಲುವ ಭಯದಿಂದಾಗಿ ವಿರೋಧ ಪಕ್ಷಗಳು ಒಂದಾಗುತ್ತಿವೆ. ಕಾಂಗ್ರೆಸ್ ಪಕ್ಷ ದೇಶವನ್ನು ತಪ್ಪು ದಾರಿಗೆ ಕರೆದೊಯ್ಯುತ್ತಿದೆ ಎಂದು ಆರೋಪಿಸಿದ್ದಾರೆ.
ಯಾವುದೇ ಕಾರಣಕ್ಕೂ ಭಯೋತ್ಪಾದನೆಯನ್ನು ಸಹಿಸಲಾಗದು, ದೇಶಕ್ಕೆ ತೊಂದರೆ ಉಂಟಾದಾಗ ನಾವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲೇ ಬೇಕಾಗುತ್ತದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com