ಮೇಲ್ವರ್ಗದ ಬಡವರಿಗೆ ಮೀಸಲಾತಿ: ಶಿಕ್ಷಣ ಸಂಸ್ಥೆಗಳಲ್ಲಿ ಶೇ.25 ರಷ್ಟು ಸೀಟು ಹೆಚ್ಚಳ: ಪ್ರಕಾಶ್ ಜಾವ್ಡೇಕರ್

ಮೇಲ್ವರ್ಗದ ಬಡವರಿಗೂ ಶೇ.10 ಮೀಸಲಾತಿ ಘೋಷಣೆ ಬೆನ್ನಲ್ಲೇ ದೇಶದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿನ ಸೀಟುಗಳ ಶೇ.25 ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ತಿಳಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಮೇಲ್ವರ್ಗದ ಬಡವರಿಗೂ ಶೇ.10 ಮೀಸಲಾತಿ ಘೋಷಣೆ ಬೆನ್ನಲ್ಲೇ ದೇಶದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿನ ಸೀಟುಗಳ ಶೇ.25 ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ತಿಳಿಸಿದ್ದಾರೆ. 
ನವದೆಹಲಿಯಲ್ಲಿ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಜಾವಡೇಕರ್ ಅವರು, ಇತ್ತೀಚೆಗೆ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗಾಗಿ ಜಾರಿಗೆ ತರಲಾದ ಶೇ 10ರಷ್ಟು ಮೀಸಲಾತಿ​ ಪರಿಣಾಮದಿಂದ ಈ ಹಿಂದೆ ಜಾರಿಯಲ್ಲಿದ್ದ ಮೀಸಲಾತಿ ಮೇಲೆ ಯಾವುದೇ ಪರಿಣಾಮ ಬೀರ ಬಾರದೆಂಬ ಕಾರಣಕ್ಕೆ 2019-2020 ಶೈಕ್ಷಣಿಕ ವರ್ಷದಿಂದ ದೇಶದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿನ ಸೀಟುಗಳ ಶೇ.25 ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
'ಶಿಕ್ಷಣ ಸಂಸ್ಥೆಗಳಲ್ಲಿನ ಸೀಟುಗಳ ಹೆಚ್ಚಳಿಕೆ ಸಂಬಂಧ ಯೂನಿವರ್ಸಿಟಿ ಗ್ರಾಂಟ್ಸ್ ಕಮಿಷನ್ (ಯುಜಿಸಿ) ಮತ್ತು ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಷನ್ (AICTE) ಅವರೊಂದಿಗೆ ಇಂದು ನಡೆಸಲಾದ ಸಭೆಯಲ್ಲಿ ಈ ನಿರ್ಣಯ ಮಾಡಲಾಗಿದೆ. ಇನ್ನು ಈ ಸೀಟುಗಳ ಹೆಚ್ಚಳಿಕೆಯನ್ನ ಇಂದಿನಿಂದಲೇ ಜಾರಿಯಾಗುವಂತೆ ಸೂಚಿಸಲಾಗಿದೆ. ಜೊತೆಗೆ ಸೀಟುಗಳ ಹೆಚ್ಚಳಿಕೆಯನ್ನ ಶಿಕ್ಷಣ ಸಂಸ್ಥೆಗಳು ಪ್ರಾಸ್ಪೆಕ್ಟಸ್ ಗಳಲ್ಲಿ ವಿದ್ಯಾರ್ಥಿಗಳಿಗೆ ತಿಳಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು. 
ಮೀಸಲಾತಿ ಕೋಟಾ ಕಾನೂನು ಎಲ್ಲಾ ಖಾಸಗಿ ಅಥವಾ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುತ್ತದೆ ಮತ್ತು ಮೀಸಲಾತಿ ಕೋಟಾ ದೇಶದಲ್ಲಿನ 40,000 ಕಾಲೇಜುಗಳಲ್ಲಿ ಮತ್ತು ಸುಮಾರು 900 ವಿಶ್ವವಿದ್ಯಾನಿಲಯಗಳಲ್ಲಿ ಜಾರಿಗೊಳಿಸಲಾಗುತ್ತದೆ ಎಂದು ಜಾವಡೇಕರ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com