ಬಿಜೆಪಿ ಅಧ್ಯಕ್ಷ ಅಮಿತ್ ಶಾಗೆ ಹೆಚ್ 1ಎನ್ 1 ಸೋಂಕು ಶಂಕೆ, ಏಮ್ಸ್ ಆಸ್ಪತ್ರೆಗೆ ದಾಖಲು!

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಹಂದಿ ಜ್ವರ ಸೋಂಕು ತಗುಲಿದ್ದು, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಹೆಚ್ 1ಎನ್ 1 ಸೋಂಕು ಸೋಂಕು ತಗುಲಿದ್ದು, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಸ್ವತಃ ಅಮಿತ್ ಶಾ ಅವರೇ ತಮ್ಮ ಟ್ವಿಟರ್ ಖಾತೆಯ ಬರೆದಿದ್ದು, ನನಗೆ ಹೆಚ್ 1ಎನ್ 1 ಸೋಂಕು ಸೋಂಕು ತಗುಲಿದ್ದು ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ದೇವರ ಕೃಪೆ ಮತ್ತು ನಿಮ್ಮೆಲ್ಲರ ಪ್ರೀತಿ ಮತ್ತು ಆಶೀರ್ವಾದದಿಂದ ಶೀಘ್ರ ಗುಣಮುಖನಾಗಿ ಬರುತ್ತೇನೆ ಎಂದು ಶಾ ಟ್ವೀಟ್ ಮಾಡಿದ್ದಾರೆ.
ಇನ್ನು ಇದೇ ವಿಚಾರವಾಗಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರೂ ಕೂಡ ಟ್ವೀಟ್ ಮಾಡಿದ್ದು, ಅಮಿತ್ ಶಾ ಅವರೊಂದಿಗೆ ನಾನು ಮಾತುಕತೆ ನಡೆಸಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com