ಶೀಘ್ರದಲ್ಲೇ ಕೇಂದ್ರ ಸರ್ಕಾರದಿಂದ ರೈತರಿಗೆ ಪ್ಯಾಕೇಜ್ ಘೋಷಣೆ: ಕೃಷಿ ರಾಜ್ಯ ಸಚಿವ

ಕೇಂದ್ರ ಸರ್ಕಾರದಿಂದ ಶೀಘ್ರದಲ್ಲಿಯೇ ಪ್ಯಾಕೇಜ್ ವೊಂದು ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಪಾರ್ಶೋತ್ತಮ್ ರುಪಾಲಾ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ರೈತರ ಸಂಕಷ್ಟಕ್ಕೆ ನೆರವಾಗುವಲು ಕೇಂದ್ರ ಸರ್ಕಾರ ವಿವಿಧ ಕ್ರಮಗಳನ್ನು ಕೈಗೊಳ್ಳಲಿದೆ ಎಂಬ ಊಹಾಪೋಹಗಳ ನಡುವೆ  ರೈತರ ಆದಾಯ ದುಪ್ಪಟ್ಟುಗೊಳಿಸುವ ನಿಟ್ಟಿನಲ್ಲಿ  ಕೇಂದ್ರ ಸರ್ಕಾರದಿಂದ ಶೀಘ್ರದಲ್ಲಿಯೇ ಪ್ಯಾಕೇಜ್ ವೊಂದು ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಪಾರ್ಶೋತ್ತಮ್ ರುಪಾಲಾ ತಿಳಿಸಿದ್ದಾರೆ.

ಪರಿಹಾರ ಪ್ಯಾಕೇಜ್ ಫೆಬ್ರವರಿ 1 ರಂದು ಮಂಡನೆಯಾಗಲಿರುವ ಬಜೆಟ್ ನಲ್ಲಿಯೇ ಘೋಷಣೆಯಾಗುತ್ತಾ ? ಅಥವಾ ಅದಕ್ಕೂ ಮುಂಚಿತವಾಗಿ ಘೋಷಣೆಯಾಗುತ್ತಾ  ಎಂಬುದರ ಬಗ್ಗೆ ಸಚಿವರು ಸ್ಪಷ್ಟಪಡಿಸಲಿಲ್ಲ.

2019-20 ಸಾಲಿನ ಆರ್ಥಿಕ ವರ್ಷದ ಬಜೆಟ್ ನಲ್ಲಿ ಹಣಕಾಸು ಸಚಿವಾಲಯಕ್ಕೆ ಕಳುಹಿಸಿರುವ ಶಿಫಾರಸ್ಸುಗಳನ್ನು ಹಂಚಿಕೊಳ್ಳಲು ರೂಪಾಲಾ ನಿರಾಕರಿಸಿದರು.ರೈತರಿಗಾಗಿ ಉದ್ದೇಶಿಸಿತ ಪ್ಯಾಕೇಜ್ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇನ್ನೂ ಹೆಚ್ಚು ದಿನ ಕಾಯುವಂತಹ ಅವಶ್ಯಕತೆ ಇಲ್ಲ ಎಂದರು.

ನಿಗದಿತ ಅವಧಿಯಲ್ಲಿ ಬೆಳೆ ಸಾಲ ಪಾವತಿಸಿರುವ ರೈತರ ಬಡ್ಡಿಯನ್ನು ಮನ್ನಾ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ. ಆಹಾರ ಬೆಳೆಗಾಗಿ  ವಿಮಾ ನೀತಿ ಪಡೆಯಲು ಸಂಪೂರ್ಣವಾಗಿ ಪ್ರೀಮಿಯಂ ಮನ್ನಾ ಮಾಡುವ ಪ್ರಸ್ತಾವವೂ ಇದೆ ಎನ್ನಲಾಗಿದೆ.

ತೆಲಂಗಾಣ, ಒಡಿಸ್ಸಾ ಸರ್ಕಾರ ಜಾರಿಗೆ ತಂದಿರುವ ರೈತರಿಗೆ ನಿಗದಿತ ಮೊತ್ತ ನೇರ ವರ್ಗಾವಣೆ ಯೋಜನೆ ಬಗ್ಗೆಯೂ  ಕೇಂದ್ರ ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂಬುದು ತಿಳಿದುಬಂದಿದೆ.

ಇದಕ್ಕೂ ಮುನ್ನ  ಕೃಷಿ  ವಿಷಯ ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ಸಚಿವರು, ರಾಬಿ ಮತ್ತು ಖರೀಪ್  ಬೆಳೆ ಬೆಳೆಯುವ ಪ್ರದೇಶವನ್ನು ವಿಸ್ತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಗಮನ ಅರಿಸುತ್ತಿದೆ. ಇದರಿಂದಾಗಿ ರೈತರ ಆದಾಯದಲ್ಲಿ ಹೆಚ್ಚಳವಾಗಲಿದೆ ಎಂದು ಹೇಳಿದರು.

ಪ್ರಸ್ತುತ 45 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೇಸಿಗೆ ಬೆಳೆ ಬೆಳೆಯಲಾಗುತ್ತಿದ್ದು, ಇದರಲ್ಲಿ 20 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭತ್ತ  ಬೆಳೆಯಲಾಗುತ್ತದೆ. ಇದರಲ್ಲಿ ಈ ವರ್ಷ  4.5 ಮಿಲಿಯನ್ ಟನ್  ಅಕ್ಕಿ ಉತ್ಪಾದನೆಯಾಗುವ ಸಾಧ್ಯತೆ ಇದೆ ಎಂದು ಕೃಷಿ ಇಲಾಖೆ ಕಾರ್ಯದರ್ಶಿ ಸಂಜಯ್ ಅಗರ್ ವಾಲ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com